ಸಾರಾಂಶ
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಕ್ಷೇತ್ರದ ಟಿಕೆಟ್ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರುಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ನನ್ನ ಕರ್ಮಭೂಮಿ, ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುವುದು ನನ್ನ ಬಯಕೆ ಎಂದರು.
ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಬೆಂಬಲಿಗರೂ ಸೇರಿ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಈ ಬಗ್ಗೆ ಮಾರ್ಚ್ ನಂತರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.ಮಂಡ್ಯದಲ್ಲಿ ನನ್ನ ಪತಿ ಅಂಬರೀಷ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಾಕಷ್ಟು ಜನಪ್ರಿಯ ಕೆಲಸಗಳನ್ನು ಮಾಡಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು ಪಕ್ಷದ ತೀರ್ಮಾನಗಳಲ್ಲಿ ಭಾಗಿಯಾಗಿಲ್ಲ. ನಾನಿನ್ನೂ ಸ್ವತಂತ್ರ ಲೋಕಸಭಾ ಸದಸ್ಯೆ. ನಂತರದ ದಿನಗಳಲ್ಲಿ ನನ್ನ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತೇನೆ ಎಂದರು.;Resize=(128,128))
;Resize=(128,128))
;Resize=(128,128))
;Resize=(128,128))