ಜೆಡಿಎಸ್‌ ಕಾರ್ಯಕರ್ತರು ತ ಪಕ್ಷ ಸೇರಲು ಮುಂದಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

 ಬೆಂಗಳೂರು : ಜೆಡಿಎಸ್‌ ಶಾಸಕರ ವಿಚಾರವಾಗಿ ಮಾತನಾಡುವುದಿಲ್ಲ. ಜೆಡಿಎಸ್‌ ಕಾರ್ಯಕರ್ತರು ತಮ್ಮ ಭವಿಷ್ಯವನ್ನು ತಾವೇ ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದೇನಷ್ಟೇ. ಆ ಕಾರ್ಯಕರ್ತರು ಕೂಡ ಎಷ್ಟು ದಿನ ಕಾಯಲು ಸಾಧ್ಯ? ಅವರಿಗೂ ಜಾತ್ಯತೀತ ಸಿದ್ಧಾಂತದ ರಾಷ್ಟ್ರೀಯ ಪಕ್ಷದ ಅಗತ್ಯವಿದೆ. ಹೀಗಾಗಿ ಅನೇಕ ಕಾರ್ಯಕರ್ತರು ಪಕ್ಷ ಸೇರಲು ಮುಂದಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಹೇಳಿಕೆಗೆ ಉತ್ತರಿಸಿದ ಅವರು, ನನಗೂ ಜೋತಿಷ್ಯ ಕೇಳುವ ಚಟವಿದೆ. ಈಗ ಅಶೋಕ್‌ ಅವರು ಜ್ಯೋತಿಷ್ಯ ಹೇಳುವ ಬೋರ್ಡ್‌ ಹಾಕಿಕೊಂಡಿದ್ದಾರೆ. ಸಮಯ ಸಿಕ್ಕರೆ ನಾನು ಅಶೋಕ್‌ ಬಳಿ ಹೋಗಿ ಶಾಸ್ತ್ರ ಕೇಳುತ್ತೇನೆ ಎಂದು ವ್ಯಂಗ್ಯವಾಡಿದರು.