ಸತತ 2 ದಿನ ದಿಲ್ಲಿಯಲ್ಲಿ ಎಚ್ಡಿಕೆ ಭೇಟಿಯಾದ ಸಚಿವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ!

| N/A | Published : Mar 27 2025, 06:36 AM IST

satish jarkiholi

ಸಾರಾಂಶ

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ದೆಹಲಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

  ನವದೆಹಲಿ : ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ದೆಹಲಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕುಮಾರಸ್ವಾಮಿಯವರ ದೆಹಲಿ ನಿವಾಸದಲ್ಲಿ ಈ ಭೇಟಿ ನಡೆಯಿತು. ಮಂಗಳವಾರ ರಾತ್ರಿ ಕುಮಾರಸ್ವಾಮಿಯವರ ಮನೆಗೆ ಭೋಜನಕ್ಕೆ ತೆರಳಿದ ಜಾರಕಿಹೊಳಿ, ಸುಮಾರು ಒಂದೂವರೆ ತಾಸು ಮಾತುಕತೆ ನಡೆಸಿದರು. ಮಾತುಕತೆ ವೇಳೆ, ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್‌ ಪ್ರಕರಣ, ರಾಜ್ಯದ ಪ್ರಸಕ್ತ ರಾಜಕೀಯ ಪರಿಸ್ಥಿತಿ ಸೇರಿ ಹಲವು ವಿಚಾರಗಳ ಕುರಿತು ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

ನಂತರ, ಬುಧವಾರ ಬೆಳಗ್ಗೆ ಮತ್ತೊಮ್ಮೆ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ಜಾರಕಿಹೊಳಿ, ಸುಮಾರು ಹೊತ್ತು ಮಾತುಕತೆ ನಡೆಸಿದರು. ರಾಜ್ಯದಲ್ಲಿ ಹನಿಟ್ರ್ಯಾಪ್‌ ಪ್ರಕರಣ ಸದ್ದು ಮಾಡುತ್ತಿರುವ ಈ ವೇಳೆಯಲ್ಲಿ ಉಭಯ ನಾಯಕರು ಎರಡೆರಡು ಸಲ ಭೇಟಿ ಮಾಡಿ, ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.