ವಿಚಾರಣೆಗೆ ಕರೆದರೆ ಹಬ್ಬದ ಬಳಿಕ ಬರುವೆ ಎಂದ ಸಚಿವ ರಾಜಣ್ಣ - ಹನಿಟ್ರ್ಯಾಪ್‌ ಕೇಸಲ್ಲಿ ದಿನ ದೂಡಿದ ಮಂತ್ರಿ

| N/A | Published : Mar 29 2025, 07:58 AM IST

Minister KN Rajanna

ಸಾರಾಂಶ

ಹನಿಟ್ರ್ಯಾಪ್ ಯತ್ನ ಪ್ರಕರಣ ಸಂಬಂಧದ ವಿಚಾರಣೆಗೆ ಯುಗಾದಿ ಹಬ್ಬದ ನಂತರ ಹಾಜರಾಗುವುದಾಗಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಿಐಡಿ ಅಧಿಕಾರಿಗಳಿಗೆ ವಿನಂತಿಸಿದ್ದಾರೆ ಎಂದು ತಿಳಿದು ಬಂದಿದೆ.

  ಬೆಂಗಳೂರು : ಹನಿಟ್ರ್ಯಾಪ್ ಯತ್ನ ಪ್ರಕರಣ ಸಂಬಂಧದ ವಿಚಾರಣೆಗೆ ಯುಗಾದಿ ಹಬ್ಬದ ನಂತರ ಹಾಜರಾಗುವುದಾಗಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಿಐಡಿ ಅಧಿಕಾರಿಗಳಿಗೆ ವಿನಂತಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಸಲುವಾಗಿ ಸಚಿವರನ್ನು ಸಂಪರ್ಕಿಸಿ ಹೇಳಿಕೆ ಪಡೆಯಲು ಅಧಿಕಾರಿಗಳು ಶುಕ್ರವಾರ ಕರೆ ಮಾಡಿದ್ದರು. 

ಕರೆ ಸ್ವೀಕರಿಸಿದ ರಾಜಣ್ಣ ಅವರು, ಯುಗಾದಿ ಹಾಗೂ ಹೊಸತೊಡಕು ಮುಗಿದ ಬಳಿಕ ವಿಚಾರಣೆಗೆ ಹಾಜರಾಗುತ್ತೇನೆ, ಪ್ರಕರಣದ ಬಗ್ಗೆ ವಿವರ ಕೊಡುತ್ತೇನೆ ಎಂದು ಸಮಯಾವಕಾಶ ಕೋರಿದ್ದಾರೆ. ಇದಕ್ಕೆ ಸಮ್ಮತಿಸಿದ ಅಧಿಕಾರಿಗಳು, ಯುಗಾದಿ ನಂತರ ವಿಚಾರಣೆ ಚುರುಕುಗೊಳಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಹನಿಟ್ರ್ಯಾಪ್ ಯತ್ನ ಕುರಿತು ವಿಚಾರಣೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು, ನಗರದಲ್ಲಿರುವ ಸಚಿವರ ಸರ್ಕಾರಿ ಅಧಿಕೃತ ನಿವಾಸಕ್ಕೆ ತೆರಳಿ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದ್ದರು.

ಹನಿಟ್ರ್ಯಾಪ್‌ ಬಗ್ಗೆ ನಾನು

ವರಿಷ್ಠರಿಗೆ ದೂರು ನೀಡಿಲ್ಲ

ದೆಹಲಿ ಭೇಟಿ ವೇಳೆ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿದಾಗ ಹನಿಟ್ರ್ಯಾಪ್‌ ಬಗ್ಗೆ ದೂರು ನೀಡಿಲ್ಲ. ವರಿಷ್ಠರು ಅವರದ್ದೇ ಮೂಲಗಳಿಂದ ಮಾಹಿತಿ ಪಡೆದಿರುತ್ತಾರೆ. ಹೈಕಮಾಂಡ್‌ಗೆ ನಾವು ಹೇಳುವ ಅಗತ್ಯವಿಲ್ಲ.

- ಸತೀಶ್‌ ಜಾರಕಿಹೊಳಿ, ಸಚಿವ