ಸಾರಾಂಶ
ನಾನು ಆರೋಗ್ಯವಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ನಿಮಗೆ ಚಿಂತೆ ಬೇಡ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ.
ಕಟಕ್: ನಾನು ಆರೋಗ್ಯವಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ನಿಮಗೆ ಚಿಂತೆ ಬೇಡ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ.
ಬುಧವಾರ ನವೀನ್ ಪಟ್ನಾಯಕ್ ಅವರ ಆರೋಗ್ಯ ದಿಢೀರ್ ಹದಗೆಟ್ಟಿರುವ ಹಿಂದೆ ಷಡ್ಯಂತ್ರದ ಶಂಕೆ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರ ಹೇಳಿಕೆಗೆ ಉತ್ತರಿಸಿ ಅವರು, ಕಳೆದ ತಿಂಗಳು ನಾನು ರಾಜ್ಯದಲ್ಲಿ ಚುನಾವಣಾ ಪ್ರಚಾರ ಮಾಡಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಅಷ್ಟು ಕಾಳಜಿ ಇದ್ದಿದ್ದರೆ ನನಗೆ ಕರೆ ಮಾಡಿ ಆರೋಗ್ಯ ವಿಚಾರಿಸಬಹುದಾಗಿತ್ತು. ಹೀಗೆ ಸಾರ್ವಜನಿಕವಾಗಿ ಹೇಳುವ ಅವಶ್ಯಕತೆ ಇರಲಿಲ್ಲ. ನನ್ನ ಆರೋಗ್ಯದ ಬಗ್ಗೆ ಒಡಿಶಾ ಮತ್ತು ದೆಹಲಿ ಬಿಜೆಪಿ ನಾಯಕರು ಸುಳ್ಳು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಕಿಡಿಕಾರಿದರು.
ಒಡಿಶಾದ 4.5 ಕೋಟಿ ಜನತೆ ನನ್ನ ಕುಟುಂಬವಿದ್ದಂತೆ, ಜೂ.1 ರಂದು ಯಾರಿಗೆ ಮತ ಹಾಕಬೇಕು ಎಂದು ಅವರಿಗೆ ಗೊತ್ತಿದೆ ಎಂದರು.