ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಜನ್ಮದಿನವಾದ ಮಂಗಳವಾರ (ಸೆ.17) ಮಡಿಕೇರಿಯಲ್ಲಿ ಜನಿಸಿದ ಗಂಡು ಮಗುವಿಗೆ ಪೋಷಕರು ನರೇಂದ್ರ ಮೋದಿ ಎಂದು ಹೆಸರಿಟ್ಟು ನಾಮಕರಣ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಪ್ರಧಾನಿ ನರೇಂದ್ರ ಮೋದಿ ಜನ್ಮದಿನವಾದ ಮಂಗಳವಾರ (ಸೆ.17) ಮಡಿಕೇರಿಯಲ್ಲಿ ಜನಿಸಿದ ಗಂಡು ಮಗುವಿಗೆ ಪೋಷಕರು ನರೇಂದ್ರ ಮೋದಿ ಎಂದು ಹೆಸರಿಟ್ಟು ನಾಮಕರಣ ಮಾಡಿದ್ದಾರೆ.ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂದರ ನಗರದ ನಿವಾಸಿಗಳಾದ ಮಹೇಂದ್ರ-ಜಯಲಕ್ಷ್ಮೀ ದಂಪತಿಗೆ ಮಂಗಳವಾರ ಗಂಡು ಮಗು ಜನಿಸಿದೆ. ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ದಂಪತಿ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರು ಇಟ್ಟಿದ್ದಾರೆ. ಈ ವೇಳೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಶುಭ ಕೋರಿ ಮಗುವಿಗೆ ಒಂದು ಗ್ರಾಂ ಚಿನ್ನದ ಉಂಗುರ ತೊಡಿಸಿ ಆಸ್ಪತ್ರೆ ಆವರಣದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.