ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಬೆಂಬಲಕ್ಕಾಗಿ ಕಾಂಗ್ರೆಸ್ ದುಂಬಾಲು

| Published : Mar 29 2024, 12:47 AM IST

ಸಾರಾಂಶ

ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮನೆಗೆ ಕಾಂಗ್ರೆಸ್ ನಾಯಕರು ಗುರುವಾರ ರಾತ್ರಿ ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಭೇಟಿ ನೀಡಿದರು. ಲೋಕಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಮುನಿಸು ಮರೆತು ಸಹಕಾರ ನೀಡಲು ಕೋರಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ಚಾಮರಾಜನಗರ ಗೆಲ್ಲಲು ಕಾಂಗ್ರೆಸ್ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ.

ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮನೆಗೆ ಕಾಂಗ್ರೆಸ್ ನಾಯಕರು ಗುರುವಾರ ರಾತ್ರಿ ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಭೇಟಿ ನೀಡಿದರು. ಲೋಕಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಮುನಿಸು ಮರೆತು ಸಹಕಾರ ನೀಡಲು ಕೋರಿದ್ದಾರೆ. ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಗೆಲ್ಲಲ್ಲು ಶ್ರೀನಿವಾಸ್ ಪ್ರಸಾದ್ ಸಹಕಾರಕ್ಕೆ ಅವರು ಮನವಿ ಮಾಡಿದರು. ಸಚಿವದ್ವಯರ ಜೊತೆ ಅಭ್ಯರ್ಥಿ ಎಂ.ಲಕ್ಷ್ಮಣ್, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ, ಶಾಸಕ ಗಣೇಶ್ ಪ್ರಸಾದ್ ಇದ್ದರು.

ರಾಜ್ಯದಲ್ಲಿ 28 ಕ್ಷೇತ್ರದಲ್ಲಿಯೂ ಬಿಜೆಪಿ ಮೈತ್ರಿ ಕೂಟಕ್ಕೆ ಗೆಲುವು- ಹೊಸಹಳ್ಳಿ ವೆಂಕಟೇಶ್ಕನ್ನಡಪ್ರಭ ವಾರ್ತೆ ಭೇರ್ಯ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ 28 ಕ್ಷೇತ್ರದಲ್ಲಿಯು ಸಹ ಗೆಲುವು ಸಾಧಿಸಿ, ಮತ್ತೊಮ್ಮೆ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್ ಹೇಳಿದ್ದಾರೆ.ದೇಶದಲ್ಲಿಯೇ ಜಿದ್ದಾಜಿದ್ದಿ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿರುವುದು ಸ್ವಾಗತಾರ್ಹ. ರಾಜ್ಯದೆಲ್ಲೆಡೆ ಬಿಜೆಪಿ ಮೈತ್ರಿ ಕೂಟದ ಅಭ್ಯರ್ಥಿಗಳ ಗೆಲುವಿಗೆ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಂದು ಘೋಷಣೆಯಾದ ಬಳಿಕ ಚುನಾವಣೆ ನಡೆಯುವ ಮುನ್ನವೇ ಇಡೀ ಜಿಲ್ಲೆಯ ಮತದಾರರು ಮೈತ್ರಿ ಅಭ್ಯರ್ಥಿ ಪರವಾಗಿ ಮತ ನೀಡಲಿದ್ದಾರೆ, ಆದ್ದರಿಂದ ಕುಮಾರಸ್ವಾಮಿ ಅವರ ಗೆಲುವು ನಿಶ್ಚಿತ ಎಂದು ಅವರು ತಿಳಿಸಿದ್ದಾರೆ.