ಸಾರಾಂಶ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆ ಯಶಸ್ವಿಯಾಗಿರುವ ಬಗ್ಗೆ ಮಾಹಿತಿ ನೀಡಿದರು.
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸೆಪ್ಟೆಂಬರ್‌ನಲ್ಲಿ ದೆಹಲಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆಯೂ ಅವರು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.