ಸಾರಾಂಶ
ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೈಸೂರು : ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮುಡಾ ನಿವೇಶನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಲೋಕಾಯುಕ್ತ ಪೊಲೀಸರು, ಮೈಸೂರಿನ ಆಗಿನ ಜಿಲ್ಲಾಧಿಕಾರಿ ಜಿ. ಕುಮಾರ್ ನಾಯ್ಕ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು. ಲೋಕಾಯುಕ್ತ ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಜಿ.ಕುಮಾರ್ ನಾಯ್ಕ್ ಅವರು, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದರು.
ಕೆಸರೆಯ ವಿವಾದಿತ ಜಮೀನು ಭೂಪರಿವರ್ತನೆ ಮಾಡಿದ ಸಂಬಂಧ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ಲೋಕಾಯುಕ್ತ ಪೊಲೀಸರ ತಂಡ ಜಿ.ಕುಮಾರ್ ನಾಯ್ಕ್ ಅವರನ್ನು ಈ ವೇಳೆ ಪ್ರಶ್ನೆಗಳನ್ನು ಕೇಳಲಾಯಿತು.