ಸಾರಾಂಶ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಸಾಮಾನ್ಯ ಆಸ್ತಿ ಕಸಿದು, ಅದನ್ನು ಹೆಚ್ಚು ಮಕ್ಕಳು ಹೆರುವ ಕುಟುಂಬಗಳಿಗೆ ನೀಡುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ.
ಹೈದರಾಬಾದ್: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಸಾಮಾನ್ಯ ಆಸ್ತಿ ಕಸಿದು, ಅದನ್ನು ಹೆಚ್ಚು ಮಕ್ಕಳು ಹೆರುವ ಕುಟುಂಬಗಳಿಗೆ ನೀಡುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ.
ಇಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಒವೈಸಿ ‘ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂದು ಹಿಂದೂಗಳಲ್ಲಿ ದ್ವೇಷ ಭಾವನೆ ಬಿತ್ತುತ್ತಿದ್ದಾರೆ. ಆದರೆ ಅವರ ಸರ್ಕಾರದ ಅಂಕಿ ಅಂಶವೇ ಹೇಳುವಂತೆ ಮುಸ್ಲಿಮರ ಜನನ ಪ್ರಮಾಣ ಕಡಿಮೆಯಾಗಿದೆ. ಜೊತೆಗೆ ಮುಸ್ಲಿಮರೇ ಹೆಚ್ಚು ಕಾಂಡೋಂ ಬಳಕೆ ಮಾಡುತ್ತಾರೆ ಎಂದು ಹೇಳಲು ನನಗೆ ಯಾವುದೇ ಸಂಕೋಚವಿಲ್ಲ’ ಎಂದು ಹೇಳಿದರು.