ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ರೆ ರಾಹುಲ್‌ ಈ ದೇಶ ಮಾರಿಬಿಡ್ತಾರೆ : ಮುತಾಲಿಕ್‌

| Published : Sep 10 2024, 01:44 AM IST / Updated: Sep 11 2024, 09:50 AM IST

pramod muthalik
ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ರೆ ರಾಹುಲ್‌ ಈ ದೇಶ ಮಾರಿಬಿಡ್ತಾರೆ : ಮುತಾಲಿಕ್‌
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈ ದೇಶವನ್ನು ಮಾರಿಬಿಡುತ್ತಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಆರೋಪಿಸಿದ್ದಾರೆ.

  ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈ ದೇಶವನ್ನು ಮಾರಿಬಿಡುತ್ತಾರೆ. ನಮಗೆ ಮೋದಿ ಬೇಕು. ಆದರೆ, ರಾಜ್ಯದ ಬಿಜೆಪಿ ನಾಯಕರು ಸರಿಯಿಲ್ಲ. ನಿರ್ಲಜ್ಯ ರಾಜಕಾರಣಿಗಳು ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹರಿಹಾಯ್ದರು.

ನಗರದ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪಿಸಿದ ಗಣೇಶಮೂರ್ತಿಗೆ ಸೋಮವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂದೂಗಳು ಶಾಂತಿಪ್ರಿಯರು ಎಂಬುದನ್ನು ಹಿಂದಿನಿಂದಲೂ ತೋರಿಸುತ್ತಾ ಬಂದಿದ್ದೇವೆ. ಈ ಬಾರಿ ಗಣೇಶೋತ್ಸವಕ್ಕೆ ವಿರೋಧಿಗಳೂ ಸಹಕಾರ ನೀಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಇಲ್ಲಿನ ರಾಣಿ ಚೆನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ ದೇಶದ್ರೋಹಿ ಪಕ್ಷವಾಗಿದೆ. ಹಲವು ಹಿಂದೂಗಳ ಕೊಲೆಯಲ್ಲಿ ಈ ದೇಶದ್ರೋಹಿ ಎಸ್‌ಡಿಪಿಐ ಪಕ್ಷದವರು ಭಾಗಿಯಾಗಿರುವುದು ಕಂಡುಬಂದಿದೆ. ಕೇಂದ್ರ ಸರ್ಕಾರ ಕೂಡಲೇ ಪಿಎಫ್ಐ ಮಾದರಿಯಲ್ಲಿ ಎಸ್‌ಡಿಪಿಐಯನ್ನು ನಿಷೇಧಿಸಬೇಕು ಎಂದು ಮುತಾಲಿಕ್‌ ಒತ್ತಾಯಿಸಿದರು.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡಿದರೆ ಗಲಭೆ, ಗಲಾಟೆಯಾಗುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ 3 ವರ್ಷದಿಂದ ಅತ್ಯಂತ ಶಾಂತಿಯುತವಾಗಿ ಗಣೇಶೋತ್ಸವ ಆಚರಿಸುವ ಮೂಲಕ ಹಿಂದೂಗಳು ಶಾಂತಿಪ್ರಿಯರು ಎಂಬುದನ್ನು ತೋರಿಸಿಕೊಟ್ಟಿದ್ದೇವೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಹೇಳಿದರು.