ಸಾರಾಂಶ
ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿ ಸ್ಥಳೀಯ ಗ್ರಾಹಕರ ಮೇಲೆ ನಡೆಸುವ ಭಾಷಾ ಪ್ರಹಾರ ತಡೆಯಲು ರಾಷ್ಟ್ರಮಟ್ಟದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು, ಎಲ್ಲ ಸಂಸದರು ಈ ವಿಚಾರವನ್ನು ಸಂಸತ್ತಿನಲ್ಲಿ ಗಂಭೀರವಾಗಿ ಚರ್ಚಿಸಬೇಕು
ಬೆಂಗಳೂರು : ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿ ಸ್ಥಳೀಯ ಗ್ರಾಹಕರ ಮೇಲೆ ನಡೆಸುವ ಭಾಷಾ ಪ್ರಹಾರ ತಡೆಯಲು ರಾಷ್ಟ್ರಮಟ್ಟದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು, ಎಲ್ಲ ಸಂಸದರು ಈ ವಿಚಾರವನ್ನು ಸಂಸತ್ತಿನಲ್ಲಿ ಗಂಭೀರವಾಗಿ ಚರ್ಚಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ರಾಜ್ಯ ಪ್ರತಿನಿಧಿಸುವ ಸಂಸದರನ್ನು ಆಗ್ರಹಿಸಿದ್ದಾರೆ.
ರಾಜ್ಯದ ಎಲ್ಲ ಸಂಸತ್ ಸದಸ್ಯರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷರು, ಚಂದಾಪುರದಲ್ಲಿ ಎಸ್‌ಬಿಐ ಮ್ಯಾನೇಜರ್ ಅವರ ಕನ್ನಡ ವಿರೋಧಿ ಘಟನೆ ಪುನರಾವರ್ತನೆ ಆಗಬಾರದು. ಇದು ಕನ್ನಡಿಗರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಘಟನೆ. ಸಿಬ್ಬಂದಿಗೆ ಸ್ಥಳೀಯ ಭಾಷೆ ಮೇಲೆ ಪ್ರಭುತ್ವ ಹೊಂದಿದವರಾಗಬೇಕು ಎಂಬ ಷರತ್ತನ್ನು ನೇಮಕಾತಿ ಸಂದರ್ಭದಲ್ಲಿ ವಿಧಿಸಬೇಕೆಂದು ಸಂಸತ್ತಿನಲ್ಲಿ ಸಂಸದರು ಆಗ್ರಹಬೇಕು. ಯಾವುದೇ ರಾಜ್ಯದ ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಸ್ಥಳೀಯ ಭಾಷಾ ಜ್ಞಾನದ ಕುರಿತು ಪರೀಕ್ಷೆ ಎದುರಿಸಿ ಉತ್ತೀರ್ಣರಾಗಬೇಕು ಎಂದು ಮನವಿ ಮಾಡಿದ್ದಾರೆ.