ಸಾರಾಂಶ
‘ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಅವರ ಹೇಳಿಕೆ ವೈಯಕ್ತಿಕ. ಪ್ರಯಾಣ ದರ ಏರಿಕೆ ಮಾಡುತ್ತಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ‘ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಅವರ ಹೇಳಿಕೆ ವೈಯಕ್ತಿಕ. ಪ್ರಯಾಣ ದರ ಏರಿಕೆ ಮಾಡುತ್ತಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸಾರಿಗೆ ಇಲಾಖೆಯಲ್ಲಿ ಇಂತಹ ಪ್ರಸ್ತಾವನೆ ಇಲ್ಲ. ಸದ್ಯಕ್ಕೆ ದರ ಏರಿಕೆ ಮಾಡಲ್ಲ’ ಎಂದು ತಿಳಿಸಿದರು.