ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

| Published : Nov 30 2024, 07:51 AM IST

DKS Siddu
ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಇದನ್ನು ಅನುಮೋದಿಸಿ ಸಂಪುಟ ಪುನಾರಚಿಸುವ ಸಂದರ್ಭ ಉದ್ಭವ ಎಂದು ಹೇಳಿದ್ದಾರೆ.

ನವದೆಹಲಿ :  ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಇದನ್ನು ಅನುಮೋದಿಸಿ ಸಂಪುಟ ಪುನಾರಚಿಸುವ ಸಂದರ್ಭ ಉದ್ಭವ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ದೆಹಲಿ ಭೇಟಿಯ ಸಮಯದಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಬಗ್ಗೆಯಾಗಲಿ, ಪುನಾರಚನೆ ಬಗ್ಗೆಯಾಗಲಿ ಚರ್ಚಿಸಿಲ್ಲ. ಆ ವಿಷಯ ಚರ್ಚೆಗಾಗಿ ನಾವು ಇಲ್ಲಿಗೆ ಬಂದಿರಲೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು. ನಾವಂತೂ ಈ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ ಎಂದರು.

ಇದೇ ವೇಳೆ, ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ಅವರು ಮತ್ತೆ ಸಂಪುಟಸೇರ್ಪಡೆ ಆಗಲಿದ್ದಾರೆ. ಆದರೆ, ತಕ್ಷಣಕ್ಕೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ, ಈ ಬಗ್ಗೆ ಪಕ್ಷದವರನ್ನು ಕೇಳಿ ಎಂದರು.

ಸಂದರ್ಭ ಉದ್ಭವ ಆಗಿಲ್ಲ-ಡಿಸಿಎಂ:

ಸುದ್ದಿಗಾರರ ಜೊತೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಪುಟ ಪುನಾರಚನೆಗೆ ಇನ್ನೂ ಸಂದರ್ಭ ಉದ್ಭವ ಆಗಿಲ್ಲ. ಸಂದರ್ಭಬಂದಾಗಆಗುತ್ತದೆ.ಸದ್ಯಕ್ಕೆ ಒಂದು ಸಚಿವ ಸ್ಥಾನ ಮಾತ್ರ ಖಾಲಿಯಿದ್ದು, ಅದನ್ನು ಭರ್ತಿ ಮಾಡುವ ಬಗ್ಗೆಯೂ ದೆಹಲಿ ಬೇಟಿ ವೇಳೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಲ ಸಚಿವರು ತಾವುಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ, ಆ ಸ್ಥಾನದ ಬದಲಾವಣೆ ಆಗಲಿದೆಯಾ ಎಂಬ ಪ್ರಶ್ನೆಗೆ, ಈ ವಿಚಾರವನ್ನು ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದು ಎಂದಿಗೂ ಸೂಕ್ತವಲ್ಲ. ಇದರಿಂದ ರಾಜಕೀಯ ನಡೆಯುವುದಿಲ್ಲ ಎಂದು ಪರೋಕ್ಷವಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಟಾಂಗ್ ನೀಡಿದರು.

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ!

ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕೆ ನಡೆಯದು, ಬೆಳಗಾವಿ ಅಧಿವೇಶನ ಬಳಿಕ ಈ ಕಸರತ್ತು ಆರಂಭವಾಗಬಹುದು ಎಂದು 'ಕನ್ನಡಪ್ರಭ' ಮಾತ್ರ ನಿನ್ನೆ ವರದಿ ಮಾಡಿತ್ತು.

ನಾವೂ ಆಕಾಂಕ್ಷಿ: ಶಾಸಕರು

ಬೆಂಗಳೂರು: ಸಂಪುಟ ಪುನಾರಚನೆ ಸದ್ಯಕ್ಕಿಲ್ಲ ಎಂದು ಮುಖ್ಯ ಮಂತ್ರಿ, ಉಪಮುಖ್ಯಮಂತ್ರಿ ಹೇಳುತ್ತಿದ್ದರೂ ತನ್ನೀರ್ ಸೇರ್, ಎಚ್.ಸಿ. ಬಾಲಕೃಷ್ಣ, ಸಿ.ಪಿ. ಯೋಗೇಶ್ವರ್, ಪುಟ್ಟರಂಗಶೆಟ್ಟಿ, ರಾಜು ಕಾಗೆ ಸೇರಿದಂತೆ ಕೆಲವು ಶಾಸಕರು ಬಹಿರಂಗವಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.