ರಾಜ್ಯಾಧ್ಯಕ್ಷರ ಬದಲು ಬಗ್ಗೆ ಬಹಿರಂಗ ಹೇಳಿಕೆ ಬೇಡ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿವಿಮಾತು

| Published : Jan 20 2025, 07:34 AM IST

Prahlad Joshi

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ಕೆಲವರು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಯಾರಿಗೆ ಏನೇ ಅಸಮಾಧಾನ ಇದ್ದರೂ ಅದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿವಿಮಾತು ಹೇಳಿದ್ದಾರೆ.

  ಹುಬ್ಬಳ್ಳಿ : ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ಕೆಲವರು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಯಾರಿಗೆ ಏನೇ ಅಸಮಾಧಾನ ಇದ್ದರೂ ಅದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿವಿಮಾತು ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯಾಧ್ಯಕ್ಷರ ಆಯ್ಕೆ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ರಾಜ್ಯಾಧ್ಯಕ್ಷರ ಬಗ್ಗೆ ಯಾರಿಗಾದರೂ, ಏನೇ ಅಸಮಾಧಾನ ಇದ್ದರೂ ಅದನ್ನು ವರಿಷ್ಠ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಚುನಾವಣೆ ನಡೆಯುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ದೇಶಾದ್ಯಂತ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದು ಸಾಮಾನ್ಯ. ಅದರಂತೆ ರಾಜ್ಯದಲ್ಲೂ ಚುನಾವಣೆ ನಡೆಯಬಹುದು. ಆದರೆ, ಇಲ್ಲಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುತ್ತಾರೋ, ಇಲ್ಲವೋ ಎಂದು ನಾನು ಹೇಳುವುದಿಲ್ಲ ಎಂದು ಹೇಳಿದರು.