ಸಾರಾಂಶ
ಎರಡನೇ ಹಂತದ ನಾಮಪತ್ರ ಸಲ್ಲಿಕೆ ಭರಾಟೆ ಗುರುವಾರ ಅಂತ್ಯಗೊಂಡಿದ್ದು, ಕೇರಳದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಕಾಂಗ್ರೆಸ್ ಮುಖಂಡ ಕೆ.ಸಿ. ವೇಣುಗೋಪಾಲ್ ಮತ್ತು ಉತ್ತರ ಪ್ರದೇಶದಲ್ಲಿ ನಟಿ, ಬಿಜೆಪಿ ನಾಯಕಿ ಹೇಮಾಮಾಲಿನಿ ನಾಮಪತ್ರ ಸಲ್ಲಿಸಿದ್ದಾರೆ.
ತಿರುವನಂತಪುರ/ಮಥುರಾ: ಎರಡನೇ ಹಂತದ ನಾಮಪತ್ರ ಸಲ್ಲಿಕೆ ಭರಾಟೆ ಗುರುವಾರ ಅಂತ್ಯಗೊಂಡಿದ್ದು, ಕೇರಳದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಕಾಂಗ್ರೆಸ್ ಮುಖಂಡ ಕೆ.ಸಿ. ವೇಣುಗೋಪಾಲ್ ಮತ್ತು ಉತ್ತರ ಪ್ರದೇಶದಲ್ಲಿ ನಟಿ, ಬಿಜೆಪಿ ನಾಯಕಿ ಹೇಮಾಮಾಲಿನಿ ನಾಮಪತ್ರ ಸಲ್ಲಿಸಿದ್ದಾರೆ.
ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಾಜೀವ್ ಚಂದ್ರಶೇಖರ್ ಅಲ್ಲಿನ ಜಿಲ್ಲಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವ ಎಸ್. ಜೈಶಂಕರ್ ಹಾಜರಿದ್ದರು.ಅದೇ ರೀತಿ ಆಲಪ್ಪುಳ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ತಮ್ಮ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
ಇನ್ನು ಉತ್ತರ ಪ್ರದೇಶದ ಮಥುರಾ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅರ್ಭರ್ಥಿಯಾಗಿ ಸ್ಪರ್ಧಿಸುತ್ತಿರುವ ಹೇಮಾ ಮಾಲಿನಿ ಅವರು ತಮ್ಮ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಎರಡನೇ ಹಂತದ ಮತದಾನ ಏ.26ರಂದು ನಡೆಯಲಿದೆ.