ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಎಲೆಕ್ಷನ್‌ಗೆ ಅಧಿಸೂಚನೆ - ಉಪಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ

| Published : Oct 18 2024, 11:57 AM IST / Updated: Oct 18 2024, 11:58 AM IST

Badli Elections 2024 Result
ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಎಲೆಕ್ಷನ್‌ಗೆ ಅಧಿಸೂಚನೆ - ಉಪಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಮತಸಮರಕ್ಕೆ ಸಜ್ಜಾಗಿದ್ದು, ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ತನ್ಮೂಲಕ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಮತಸಮರಕ್ಕೆ ಸಜ್ಜಾಗಿದ್ದು, ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ತನ್ಮೂಲಕ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಿಸಲಿದ್ದಾರೆ. ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದ್ದು, ಇದೇ ತಿಂಗಳು 25ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 28ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. 30ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನ.13ರಂದು ಮತದಾನ ನಡೆಯಲಿದ್ದು, ನ.23ರಂದು ಮತ ಎಣಿಕೆ ಜರುಗಲಿದೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾವಿ ಮತ್ತು ಇ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಿಗದಿ ಆಗಿದೆ.

ಈ ನಡುವೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ಆರಂಭವಾಗಿದ್ದು, ಎರಡು ಅಥವಾ ಮೂರು ದಿನಗಳಲ್ಲಿ ಅಂತಿಮಗೊಳ್ಳುವ ನಿರೀಕ್ಷೆಯಿದೆ.