ರಾಹುಲ್ ‘ಫಟಾಫಟ್‌ ಸರ್ಕಾರ’ದಲ್ಲಿ ಈಗ ಹಣವೇ ಇಲ್ಲ: ಬಿಜೆಪಿ ಲೇವಡಿ

| Published : May 20 2025, 11:48 PM IST

ಸಾರಾಂಶ

‘ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಭಿವೃದ್ಧಿ ಫಟಾಫಟ್‌ (ಶೀಘ್ರದಲ್ಲಿ) ಆಗತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರ ಪಕ್ಷ ಆಡಳಿತದಲ್ಲಿರುವ ಸರ್ಕಾರದಲ್ಲಿ ಅಭಿವೃದ್ಧಿ ಹಣ ಇಲ್ಲ’ ಎಂದು ಬಿಜೆಪಿ ಹರಿಹಾಯ್ದಿದೆ.

ನವದೆಹಲಿ: ‘ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಭಿವೃದ್ಧಿ ಫಟಾಫಟ್‌ (ಶೀಘ್ರದಲ್ಲಿ) ಆಗತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರ ಪಕ್ಷ ಆಡಳಿತದಲ್ಲಿರುವ ಸರ್ಕಾರದಲ್ಲಿ ಅಭಿವೃದ್ಧಿ ಹಣ ಇಲ್ಲ’ ಎಂದು ಬಿಜೆಪಿ ಹರಿಹಾಯ್ದಿದೆ.

ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತ್ವರಿತವಾಗಿ, ಸಕಾಲಿಕವಾಗಿ ತಲುಪುತ್ತದೆ ಎಂದಿದ್ದರು. ಆದರೆ ಇದೀಗ ವಿಳಂಬವಾಗುತ್ತಿರುವುದಕ್ಕೆ ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ‘ ರಾಹುಲ್‌ರ ಫಟಾ ಫಟ್‌ ಅರ್ಥಶಾಸ್ತ್ರವು ತನ್ನದೇ ಭಾರದಿಂದ ಕುಸಿಯುತ್ತಿದೆ. ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಕೋಟಿಗಟ್ಟಲೆ ಹಣ ವರ್ಗಾಯಿಸಲಾಗಿದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವ ಕಟುವಾಗಿದೆ, ಅವರ ಕಾಂಗ್ರೆಸ್‌ ಸರ್ಕಾರದ ಬಳಿ ಹಣವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.