ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಯುವಕರಿಗೆ ಉಚಿತ ಆನ್‌ಲೈನ್‌ ಕೋಚಿಂಗ್‌ ಕ್ಲಾಸ್‌ ಆರಂಭಿಸುವ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್‌ ಜೋಶಿ ಅವರು ಈ ಕುರಿತು ಅಧಿಕಾರಿಗಳ ಜತೆ ಸಮಾಲೋಚನಾ ಸಭೆ ನಡೆಸಿದ್ದಾರೆ.

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಯುವಕರಿಗೆ ಉಚಿತ ಆನ್‌ಲೈನ್‌ ಕೋಚಿಂಗ್‌ ಕ್ಲಾಸ್‌ ಆರಂಭಿಸುವ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್‌ ಜೋಶಿ ಅವರು ಈ ಕುರಿತು ಅಧಿಕಾರಿಗಳ ಜತೆ ಸಮಾಲೋಚನಾ ಸಭೆ ನಡೆಸಿದ್ದಾರೆ. ಯೋಜನೆಯ ಅನುಷ್ಠಾನ, ರೂಪುರೇಷೆ ಮತ್ತಿತರ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಸಿ ತ್ವರಿತ ಚಾಲನೆಗೆ ಕ್ರಮ ಕೈಗೊಂಡಿದ್ದಾರೆ.

ಉಚಿತ ಆನ್‌ಲೈನ್‌ ಕೋಚಿಂಗ್‌ ಕ್ಲಾಸ್‌

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ಉಚಿತ ಆನ್‌ಲೈನ್‌ ಕೋಚಿಂಗ್‌ ಕ್ಲಾಸ್‌ ಕುರಿತು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆಗೆ ಸಭೆ ನಡೆಸಲಾಯಿತು. ಅತ್ಯುತ್ತಮ ಗುಣಮಟ್ಟದ ಕಲಿಕಾ ವಿಷಯ, ತಜ್ಞರ ಮಾರ್ಗದರ್ಶನ ಮತ್ತು ರಚನಾತ್ಮಕವಾದ ದೇಶಾದ್ಯಂತ ಎಲ್ಲಾ ವಿದ್ಯಾರ್ಥಿಗಳನ್ನೂ ತಲುಪಬಲ್ಲ ಸದೃಢ ರಾಷ್ಟ್ರೀಯ ಪ್ಲಾಟ್‌ಫಾರ್ಮ್‌ವೊಂದನ್ನು ನಿರ್ಮಿಸುವ ಕುರಿತು ಚರ್ಚೆ ನಡೆಸಲಾಯಿತು ಎಂದು ಹೇಳಿಕೊಂಡಿದ್ದಾರೆ.

ಬಡ ಮತ್ತು ಮಧ್ಯಮವರ್ಗದ ಕುಟುಂಬಗಳ ಪಾಲಿಗೆ ಹೊರೆ

ಕೋಚಿಂಗ್‌ ಕ್ಲಾಸ್‌ಗಳು ಬಡ ಮತ್ತು ಮಧ್ಯಮವರ್ಗದ ಕುಟುಂಬಗಳ ಪಾಲಿಗೆ ಹೊರೆಯಾಗಿ ಪರಿಣಮಿಸಿದ್ದು, ಇದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಆನ್‌ಲೈನ್‌ ಕೋಚಿಂಗ್‌ ಕ್ಲಾಸ್‌ ಯೋಜನೆ ಆರಂಭಿಸುವುದಾಗಿ ಮೋದಿ ಅವರು ಸ್ವಾತಂತ್ರೋತ್ಸವ ಭಾಷಣ ವೇಳೆ ಘೋಷಿದ್ದರು.