ಕೋಲಾರದಲ್ಲಿ 50 ಸಾವಿರ ಸದಸ್ಯತ್ವ ಗುರಿ ಹೊಂದಿದ್ದು ಗ್ರಾಮೀಣ ಪ್ರದೇಶದಲ್ಲೂ ಬಿಜೆಪಿ ಸಂಘಟಿಸಿ- ಓಂಶಕ್ತಿ ಚಲಪತಿ

| Published : Oct 07 2024, 01:30 AM IST / Updated: Oct 07 2024, 05:03 AM IST

ಕೋಲಾರದಲ್ಲಿ 50 ಸಾವಿರ ಸದಸ್ಯತ್ವ ಗುರಿ ಹೊಂದಿದ್ದು ಗ್ರಾಮೀಣ ಪ್ರದೇಶದಲ್ಲೂ ಬಿಜೆಪಿ ಸಂಘಟಿಸಿ- ಓಂಶಕ್ತಿ ಚಲಪತಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಬಿಜೆಪಿ ಸದಸ್ಯತ್ವ ಮಾಡಿಸುವ ಮಹಾಸಂಪರ್ಕ ಅಭಿಯಾನ ನಡೆಸಲಾಗುತ್ತಿದೆ. ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10 ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವ ನೋಂದಣಿ ಮಾಡಿಸಲಾಗಿದೆ.

 ಕೋಲಾರ  : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸದಸ್ಯತ್ವ ಮಾಡಿಸುವ ಜೊತೆಗೆ ಮಹಾಸಂಪರ್ಕ ಅಭಿಯಾನ ನಡೆಸಲಾಗುತ್ತಿದ್ದು ಇದಕ್ಕೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ತಿಳಿಸಿದರು.

ತಾ ಲೂಕಿನ ನರಸಾಪುರ ಭಾಗದಲ್ಲಿ ಬಿಜೆಪಿಯಿಂದ ಮಹಾಸಂಪರ್ಕ ಅಭಿಯಾನದಲ್ಲಿ ಮಾತನಾಡಿ, ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10  ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವ ನೋಂದಣಿ ಮಾಡಿಸಲಾಗಿದೆ ಎಂದರು.

ಗ್ರಾಮಗಳಲ್ಲೂ ಪಕ್ಷ ಸಂಘಟಿಸಿ

ಕ್ಷೇತ್ರದಲ್ಲಿ 50  ಸಾವಿರ ಸದಸ್ಯತ್ವ ಗುರಿ ಹೊಂದಿದ್ದು, ನಗರ ಭಾಗದಲ್ಲಿ ಹೆಚ್ಚು ಕ್ರಿಯಾಶೀಲ ಚಟುವಟಿಕೆ ನಡೆಯತ್ತಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಿದೆ. ಅದರಿಂದಲೇ ಪ್ರತಿ ಗ್ರಾಮದಲ್ಲಿ ಈ ಅಭಿಯಾನ ನಡೆಯಲಿದ್ದು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದರು.ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮರ್ಥ ನಾಯಕತ್ವದಲ್ಲಿ ಭಾರತ ಸ್ವಾವಲಂಬಿ, ಸದೃಢ, ಸಶಕ್ತ ದೇಶವಾಗಿದ್ದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಕೋವಿಡ್ ನಿರ್ವಹಣೆಯಲ್ಲಿ ಸವಾಲನ್ನು ಸ್ವೀಕರಿಸಿ ಉತ್ತಮ ರೀತಿಯಲ್ಲಿ ನಿರ್ವಹಿಸುವ ಜತೆಗೆ ದೇಶದ ಜನರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಿದ್ದಾರೆ, ಗರೀಬ್ ಕಲ್ಯಾಣ ಯೋಜನೆ, ದೂರದರ್ಶಿತ್ವದೊಂದಿಗೆ ಬಿತ್ತಿರುವ ಆತ್ಮ ನಿರ್ಭರ ಭಾರತದ ಚಿಂತನೆಗಳು ದೇಶವನ್ನು ಸಂಕಷ್ಟದಿಂದ ಪಾರು ಮಾಡಬಲ್ಲದೆಂಬ ವಿಶ್ವಾಸ ಮೂಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವ ಪಡೆಯಬೇಕು ಎಂದು ಮನವಿ ಮಾಡಿದರು.ಪ್ರತಿ ಗ್ರಾಮದಲ್ಲೂ ಸಂಘಟನೆ

ಬಿಜೆಪಿ ಪಕ್ಷವು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ, ಮುಂಬರುವ ಎಲ್ಲಾ ಚುನಾವಣೆಗಳ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೂ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.ಮುಖಂಡರಾದ ಮುರಗೇಶ್, ನಾಗರಾಜ್, ಉಮೇಶ್, ಮಂಜುನಾಥ್, ಸರ್ವೇಶ್,ಮಧು, ಶ್ರೀರಾಮ್ ಇದ್ದರು.