ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನಿತ ಬಿಜೆಪಿ ನಾಯಕರು ಗೌಪ್ಯ ಸಭೆ ನಡೆಸಿದ್ದಾರೆ. ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ನಾಯಕತ್ವದ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಲಾಗಿದ್ದರೂ, ಭಾಗವಹಿಸಿದವರೆಲ್ಲರೂ ಅಸಮಾಧಾನಿತ ನಾಯಕರೇ ಆಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ ನಾನು ಬದುಕಿರುತ್ತೇನೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.
ರಾಜ್ಯದ ರಾಜಕೀಯ ಇತಿಹಾಸದಲ್ಲಿ ದೇವರಾಜ್ ಅರಸು, ರಾಮಕೃಷ್ಣ ಹೆಗಡೆ, ಬಂಗಾರಪ್ಪ, ವೀರಪ್ಪ ಮೊಯ್ಲಿ ಇವರೆಲ್ಲರೂ ಅಧಿಕಾರದಲ್ಲಿದ್ದಾಗ ತನಿಖೆಯನ್ನು ಎದುರಿಸಿದವರೇ. ಆದರೆ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿಯಾಗಿ ಎಫ್ಐಆರ್ ಹಾಕಿಸಿಕೊಂಡವರು ಇಬ್ಬರು. ಯಡಿಯೂರಪ್ಪ ಮೊದಲನೆಯವರು, ಸಿದ್ದರಾಮಯ್ಯ ನಂತರದವರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಶನಿವಾರ ಇಲ್ಲಿ ಹೇಳಿದರು.
ಮೈಸೂರು ಮೂಡಾ ಪ್ರಕರಣದಲ್ಲಿ ಕಾನೂನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ನೂರು ವರ್ಷಗಳ ಇತಿಹಾಸ ಹೊಂದಿದ್ದು, ಯಾರೂ ದ್ರೋಹ ಬಗೆಯಬಾರದು ಎಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಎಂ.ನಾರಾಯಣಸ್ವಾಮಿ ಕಿವಿಮಾತು ಹೇಳಿದರು.