ನ್ಯಾಯಾಲಯಗಳು ನ್ಯಾಯಾಂಗದ ಕಾರ್ಯ ಮಾಡುವ ಬದಲು, ಶಾಸಕಾಂಗ, ಕಾರ್ಯಾಂಗದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿವೆ. ಇದು ಸರಿಯಲ್ಲ.
ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಕ್ಫ್ ಆಸ್ತಿಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಉಪಲೋಕಾಯುಕ್ತರು ನಡೆಸಿದ್ದ ತನಿಖಾ ವರದಿ ಸೇರಿ ಇತರೆ ಮಾಹಿತಿಗಳ ಮುಖ್ಯ ಕಡತವೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.
ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ‘ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ 2024’ ಪ್ರತಿಪಕ್ಷಗಳಿಗೆ ಬಹುಮತವಿದ್ದರೂ ಮೇಲ್ಮನೆಯಲ್ಲಿ ಅಂಗೀಕಾರಗೊಂಡು ಬಿಜೆಪಿ-ಜೆಡಿಎಸ್ ತೀವ್ರ ಮುಖಭಂಗ ಎದುರಿಸಬೇಕಾಯಿತು.
ವಕ್ಫ್ ವಿವಾದಕ್ಕೆ ಸಂಬಂಧಿಸಿ ನಡೆದ ಚರ್ಚೆ ವೇಳೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತಮ್ಮದೇ ಶಾಸಕರಿಂದ ಮುಜುಗರ ಅನುಭವಿಸಿದ ಪ್ರಸಂಗ ಬುಧವಾರ ನಡೆಯಿತು.
ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ವಕ್ಫ್ ಆಸ್ತಿ ಅಕ್ರಮದ ವರದಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಯಿತು. ಸದನದ ಹೊರಗೂ ಆರೋಪ- ಪ್ರತ್ಯಾರೋಪ ನಡೆಯಿತು.
ಬೂತ್ ಮಟ್ಟದಿಂದ ಅಧ್ಯಕ್ಷರ ಬದಲಾವಣೆ ಆಗುತ್ತಿದೆ, ರಾಜ್ಯ ಮಟ್ಟದಲ್ಲಿ ಸಹ ಬದಲಾವಣೆ ಆಗುತ್ತೆ. ನಾನು ರಾಜ್ಯಾಧ್ಯಕ್ಷರ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳೋದಿಲ್ಲ. ಅವಕಾಶ ಸಿಕ್ಕಲ್ಲಿ ಅಧ್ಯಕ್ಷ ಸ್ಥಾನವನ್ನು ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.