5 ವರ್ಷ ನಾವೇ ಅಧಿಕಾರದಲ್ಲಿರುತ್ತೇವೆ. ಜನತೆಯ ಆಶೀರ್ವಾದ ಇರುವವರೆಗೆ ನನ್ನನ್ನು ಜಗ್ಗಿಸಲು-ಬಗ್ಗಿಸಲು ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಿಜೆಪಿಯ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿ ಪಕ್ಷ ಭಾರೀ ಹುಮಸ್ಸಿನಲ್ಲಿ ಇರುವ ಹೊತ್ತಿನಲ್ಲೇ ಅವರು ನೀಡಿರುವ ಈ ಹೇಳಿಕೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಡಿ.15ರಂದು ಆಯೋಜಿಸಿದ್ದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಭಿನಂದನಾ ಸಮಾರಂಭವನ್ನು ರದ್ದುಪಡಿಸಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.
ಸಚಿವ ಡಾ ಎಂ.ಸಿ.ಸುಧಾಕರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರು ಮಾಜಿ ಸಂಸದ ಎಸ್.ಮುನಿಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ನಿಂದ ಮುಖ್ಯಮಂತ್ರಿಯಾಗಲು ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಜಿ. ಪರಮೇಶ್ವರ್ ಅವರು ಇನ್ನೆಷ್ಟು ದಿನ ಕಾಯಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.
ದಿಲ್ಲಿ ನಾಯಕರು ವಿಜಯೇಂದ್ರರನ್ನೂ ಬಿಟ್ಟು ಕೊಡುತ್ತಿಲ್ಲ. ಯತ್ನಾಳರನ್ನು ಹೊರಗೆ ಹಾಕುತ್ತಿಲ್ಲ. ಇದನ್ನೆಲ್ಲಾ ನೋಡಿದರೆ ದಿಲ್ಲಿಯಲ್ಲಿ ಕುಳಿತ ಬಿಜೆಪಿ ಮದ್ದು ಅರೆಯುವ ನಾಯಕರಿಗೆ ಸಮಯ ಇಲ್ಲವೋ, ಮನಸ್ಸು ಇಲ್ಲವೋ
ಪಕ್ಷದ ಪರಿಷ್ಠರಿಗೆ ಬಿ.ವೈ.ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡುವುದು ಈಗಿನ ಔಚಿತ್ಯ ಎನಿಸಿದೆ. ಹೀಗಾಗಿ ಅವರನ್ನೇ ರಾಜ್ಯಾಧ್ಯಕ್ಷರಾಗಿ ನೇಮಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಹೇಳಿದ್ದಾರೆ.