ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷರಾಗಿರುವುದನ್ನು ವಿರೋಧಿಸಿರುವ ರಮೇಶ್ ಜಾರಕಿಹೊಳಿ ಅವರು, ಪಕ್ಷಕ್ಕೆ ಭ್ರಷ್ಟಾಚಾರದ ಕಳಂಕ ತಂದಿರುವುದೇ ವಿಜಯೇಂದ್ರ ಎಂದು ಆರೋಪಿಸಿದ್ದಾರೆ. ಪಕ್ಷಕ್ಕೆ ಸಾಮೂಹಿಕ ನಾಯಕತ್ವದ ಅಗತ್ಯವಿದ್ದು, ಏಕವ್ಯಕ್ತಿ ನಾಯಕತ್ವವನ್ನು ಒಪ್ಪುವುದಿಲ್ಲ ಎಂದಿದ್ದಾರೆ.
ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಚರ್ಚೆ ಮತ್ತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ ದೂರು ನೀಡಿರುವ ಚಲುವರಾಜು ಜತೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕುಸುಮಾ ತಂದೆ ಹಾಗೂ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಮಾತನಾಡಿದ್ದಾರೆ ಎಂದು ಹೇಳಲಾದ ಆಡಿಯೋ ವೈರಲ್ ಆಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಾಯುಕ್ತ ಸಂಸ್ಥೆಯು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಲ್ಲಿಸಿರುವ ಪ್ರಸ್ತಾವಗಳ ಮಾಹಿತಿಯನ್ನು ಒದಗಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಶಾಸಕ ಮುನಿರತ್ನ ಅವರಿಗೆ ಸಂಬಂಧಿಸಿದ ಇನ್ನೂ ಎರಡು ಆಡಿಯೋಗಳಿವೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದಾರೆ. 35% ಕಮಿಷನ್ ವಿಚಾರವೂ ಒಳಗೊಂಡ ಈ ಆಡಿಯೋಗಳನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಚುನಾವಣಾ ಸಮಯದಲ್ಲಿ ರಾಜಕೀಯ ಮಾಡಬಹುದು ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್ ತಿಳಿಸಿದರು.