ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಒತ್ತಾಯಿಸಿ ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ, ಹೀಗಾಗಿ ಯಾರೂ ಸಿಎಂ ಸ್ಥಾನಕ್ಕಾಗಿ ಮಾತನಾಡುತ್ತಿಲ್ಲ. ಯಾವುದೇ ಗೊಂದಲವಿಲ್ಲದೆ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ತನ್ಮೂಲಕ ಮುಂದಿನ ಸಿಎಂ ಕುರಿತ ಚರ್ಚೆಗೆ ತೆರೆ ಎಳೆಯಲು ಯತ್ನಿಸಿದ್ದಾರೆ.
ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಅಸಭ್ಯವಾಗಿ ಮಾತನಾಡುವುದನ್ನು ಶಾಸಕ ಪ್ರದೀಪ್ ಈಶ್ಪರ್ ನಿಲ್ಲಿಸದಿದ್ದರೆ ಅದೇ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಸ್ಥಾನದ ಬಿಜೆಪಿ ಅಭ್ಯರ್ಥಿ ಗಜೇಂದ್ರ ಎಚ್ಚರಿಸಿದ್ದಾರೆ.
ಮುಸ್ಲಿಮರ ಕೈಯಲ್ಲಿರುವ ಪೆಟ್ರೋಲ್ ಬಾಂಬ್, ತಲ್ವಾರ್ಗಳನ್ನು ಸರ್ಕಾರ ಕಿತ್ತುಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ಗಣೇಶ ಮೆರವಣಿಗೆಗಳಲ್ಲಿ ನಾವು ಅವುಗಳನ್ನು ಹಿಡಿದುಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದ್ದಾರೆ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅಭಿವೃದ್ಧಿ ವಿಚಾರದಲ್ಲಿ ಎಂದೂ ವೋಟ್ ಕೇಳಿಲ್ಲ, ಅವರ ಮಾತಿಗೂ ಕೃತಿಗೂ ಹೋಲಿಕೆ ಇಲ್ಲ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಟೀಕಿಸಿದ್ದಾರೆ.
ನಾಗಮಂಗಲ ಗಲಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖ್ಯಾತಿಗೆ ಕಳಂಕ ತರಲು ಕಾಂಗ್ರೆಸ್ ನಾಯಕರಿಂದಲೇ ನಡೆದ ಕೃತ್ಯವೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.