ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವ್ಯೆಸಗುತ್ತಿದ್ದರೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ನರೇಂದ್ರ ಮೋದಿ ಅವರನ್ನು ನ್ಯಾಯ ಕೇಳುವ ಧೈರ್ಯ ಮಾಡುತ್ತಿಲ್ಲ, ಅವರು ನ್ಯಾಯ ಕೇಳದಿದ್ದರೆ ಕರ್ನಾಟಕದ ಜನತೆಗೆ ಮಾಡುವ ದ್ರೋಹವಾಗಿದೆ ಎಂದರಲ್ಲದೆ, ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ನೀಡುತ್ತಿದೆ.
ಚುನಾವಣಾ ಆಯೋಗದ ಕಚೇರಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ತೆರಳಿ ದೂರು ಸಲ್ಲಿಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ ಪ್ರತಿಭಟನಾ ಸ್ಥಳಕ್ಕೆ ಸಮೀಪದಲ್ಲೇ ಆಯೋಗದ ಕಚೇರಿ ಇದ್ದರೂ ರಾಹುಲ್, ಖರ್ಗೆ ಅವರು ಅಲ್ಲಿಗೆ ಹೋಗಲಿಲ್ಲ.
ಅಮೆರಿಕದ ಜತೆ ಭಾರತ ವ್ಯಾಪಾರ ಸಂಘರ್ಷಕ್ಕೆ ಇಳಿದಿರುವ ನಡುವೆಯೇ ಚೀನಾದ ಟಿಯಾಂಜಿನ್ನಲ್ಲಿ ಮಾಸಾಂತ್ಯದಲ್ಲಿ ನಡೆಯಲಿರುವ ಶಾಂಘೈ ಶೃಂಗಸಭೆಗೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ರಂಪ್ ವೈರಿ ದೇಶ ಚೀನಾ ಅಧಿಕೃತವಾಗಿ ಆಹ್ವಾನಿಸಿದೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಸಂಬಂಧ ದಾಖಲೆ ಬಿಡುಗಡೆ ಮಾಡಿದ ಮರುದಿನವೇ ಕಾಂಗ್ರೆಸ್ ಪಕ್ಷವು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಬಹಿರಂಗ ಸಮಾವೇಶ ಮೂಲಕ ಮತಗಳವು ವಿರುದ್ಧ ಹೋರಾಟದ ರಣಕಹಳೆ ಮೊಳಗಿಸಿದೆ.
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ‘ಆಟಂ ಬಾಂಬ್’ ಸ್ಫೋಟಿಸಿದ್ದರು. ಅವರು ಮಾಡಿದ್ದ ಆರೋಪಗಳಿಗೆ ಮಹದೇವಪುರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಅರವಿಂದ ಲಿಂಬಾವಳಿ ತಿರುಗೇಟು ಕೊಟ್ಟಿದ್ದಾರೆ.
ಚುನಾವಣಾ ಆಯೋಗವು ಈಗ ಪ್ರಜಾಪ್ರಭುತ್ವದ ಕಾವಲುಗಾರನಾಗಿ ಉಳಿದಿಲ್ಲ. ತನ್ನ ಜವಾಬ್ದಾರಿ ಮರೆತು ಕಾರ್ಯಾಂಗದ ಕೈಗೊಂಬೆಯಾಗಿದೆ. ಇದರ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಸಂಸತ್ತಿನಿಂದ ಜನರ ನ್ಯಾಯಾಲಯದ ಮುಂದೆ ಕೊಂಡೊಯ್ಯಲಿದೆ.