ಕಾಂಗ್ರೆಸ್ ಸರ್ಕಾರ ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿದ್ದುಗೆ ಕೋರ್ಟ್ನಿಂದ ವ್ಯತಿರಿಕ್ತ ತೀರ್ಪು ಬಂದರೆ ಡಿ.ಕೆ.ಶಿವಕುಮಾರ್, ಪರಮೇಶ್ವರ್ ಮತ್ತು ಖರ್ಗೆ ನಡುವೆ ಮುಖ್ಯಮಂತ್ರಿ ಪಟ್ಟಕ್ಕಾಗಿ ಪೈಪೋಟಿ ಶುರುವಾಗುತ್ತದೆ. ಈ ಸನ್ನಿವೇಶದಲ್ಲಿ ಖರ್ಗೆಗೆ ಅವಕಾಶ ಸಿಗುತ್ತದೆಯೇ ಅಥವಾ ಡಿ.ಕೆ.ಶಿ. ಮೇಲುಗೈ ಸಾಧಿಸುತ್ತಾರೆಯೇ ?
ಬುದ್ಧ ವಿಹಾರ ಟ್ರಸ್ಟ್ಗೆ ಸಿಎ ನಿವೇಶನ ನೀಡಿಕೆ ವಿವಾದದ ಕುರಿತು ನಾರಾಯಣಸ್ವಾಮಿ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಕ್ಕಾಗಿ ಪಕ್ಷ ಮತ್ತು ಸಿದ್ಧಾಂತ ಬದಲಾಯಿಸುವ ಗೋಸುಂಬೆ ರಾಜಕಾರಣಿ ಎಂದು ಟೀಕಿಸಿದ್ದಾರೆ.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲರು ಪಕ್ಷಪಾತ ತೋರುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕುಮಾರಸ್ವಾಮಿಗಾಗಲಿ ಇನ್ಯಾರಿಗಾಗಲಿ ಕ್ಷೇತ್ರದ ಅಭಿವೃದ್ಧಿ ಮಾಡಬೇಡಿ ಎಂದು ಹೇಳಿದ್ದೇವಾ?. ಅವರಿಗೆ ಮಾಡುವ ಅವಕಾಶ ಇತ್ತು ಮಾಡಲಿಲ್ಲ. ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಲು ಕ್ಯಾಬಿನೆಟ್ನಲ್ಲಿ ಅಂಗೀಕಾರ ಪಡೆಯಲಾಗಿದೆ.
ಚುನಾವಣೆ ವೇಳೆ ತಮ್ಮ ವಿಭಿನ್ನ ಶೈಲಿಯ ಡೈಲಾಗ್ಗಳಿಂದಾಗಿ ರಾಜ್ಯದ ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಇದೀಗ ತೆಲುಗಿನ ಖ್ಯಾತ ನಟ ಚಿರಂಜೀವಿ ಜೊತೆ ನಟಿಸಲು ಆಫರ್ ಬಂದಿದೆಯಂತೆ.
ಗೃಹಲಕ್ಷ್ಮೀ ಹಣ ಕೂಡಿಟ್ಟು ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದರು. ಇನ್ನೊಬ್ಬರು ಸೊಸೆಗೆ ಫ್ಯಾನ್ಸಿ ಸ್ಟೋರ್ ತೆರೆದರು. ಮತ್ತೊಬ್ಬರು ಊರಿಗೇ ಹೋಳಿಗೆ ಊಟ ಹಾಕಿಸಿದರು. ತಾಯಿಗೆ ಬಂದ ಹಣದಲ್ಲಿ ಹುಡುಗನೊಬ್ಬ ಪಿಯುಸಿಯಲ್ಲಿ ರ್ಯಾಂಕ್ ಗಳಿಸಿದ. ಇದನ್ನೆಲ್ಲ ನೋಡಿ ನಮ್ಮ ಮನಸ್ಸು ತುಂಬಿ ಬಂದಿದೆ
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಹೋರಾಟವನ್ನ ತೀವ್ರಗೊಳಿಸಲಿ ಕಾಂಗ್ರೆಸ್ ಮುಂದಾಗಿದೆ. ಒಂದು ಕಡೆ ಕಾನೂನು ಹೋರಾಟ, ಮತ್ತೊಂದೆಡೆ ರಾಜಕೀಯ ಹೋರಾಟ ಮಾಡಲು ಕಾಂಗ್ರೆಸ್ ತಯಾರಿ ನಡೆಸಿದೆ.