ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅತ್ಯಾಚಾರ, ಸುಲಿಗೆ, ಕೊಲೆ, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಎಲ್ಲಾ ಜೈಲುಗಳು ರೆಸಾರ್ಟ್ ಆಗಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಶುಕ್ರವಾರ ಹೈಕಮಾಂಡ್ ಜತೆಗೆ ನಡೆದ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಪೂರ್ವ ನಿಗದಿಯಂತೆ ಸಂಪುಟ ಪುನಾರಚನೆಯು ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಮಾಜಿ ಸಚಿವರಾದ ಜನಾರ್ದನರೆಡ್ಡಿ ಮತ್ತು ಮುರುಗೇಶ್ ನಿರಾಣಿ ವಿರುದ್ಧ ಪ್ರತ್ಯೇಕ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡುವ ಸಂಬಂಧ ರಾಜ್ಯಪಾಲರಿಗೆ ಲೋಕಾಯುಕ್ತ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಾಗರಿಕ ಸೌಲಭ್ಯದ (ಸಿಎ) ನಿವೇಶನಗಳನ್ನು ಅರ್ಹ ಸಂಸ್ಥೆಗಳಿಗೆ ಅತ್ಯಂತ ಪಾರದರ್ಶಕವಾಗಿ ಹಂಚಿಕೆ ಮಾಡಲಾಗಿದೆ. ಇದರಲ್ಲಿ ಯಾವ ಅಕ್ರಮವೂ ಆಗಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.