ಪೊಲೀಸ್ ಅಧಿಕಾರಿಯೊಬ್ಬ₹20 ಲಕ್ಷ ನೀಡಿ ಇಲ್ಲಿಗೆ ಬಂದಿದ್ದಾರೆ ಹಾಗೂ ಗುರುಮಠಕಲ್ ಠಾಣೆಯಲ್ಲಿ ತೆರವಾದ ಇನ್ಸ್ಪೆಕ್ಟರ್ ಹುದ್ದೆಗೆ ₹40 ಲಕ್ಷ ಬೇಡಿಕೆ ಇದೆ ಎಂದು ಆರೋಪಿಸಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರಗೆ ಪತ್ರ ಬರೆದಿದ್ದು, ವ್ಯಾಪಕ ಸಂಚಲನ ಸೃಷ್ಟಿಸಿದೆ.
‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೊಡೆ ತಟ್ಟಿವೆ.
‘ನಮ್ಮ ಪಕ್ಷದ ಒಬ್ಬ ಶಾಸಕನನ್ನೂ ಅಲ್ಲಾಡಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಏನೂ ಮಾಡಲು ಸಾಧ್ಯವಿಲ್ಲ. ಸರ್ಕಾರ ಬೀಳಿಸುತ್ತೇವೆ ಎಂಬುದು ಭ್ರಮೆ, ತಿರುಕನ ಕನಸು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ