ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ತಾಕತ್ ಇದ್ದರೆ ಭ್ರಷ್ಟಾಚಾರದ ಪಿತಾಮಹ ಅಂದರೆ ಏನು? ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಲಿ. ಆಗ ಅವರನ್ನು ಬಿಜೆಪಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಸಿದ್ದರಾಮಯ್ಯ ದಲಿತ ಪರ ಎಂದು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಎಸ್ಸಿ,ಟಿಪಿಎಸ್ಸಿಗಳ ವಿವಿಧ ಕಾರ್ಯಕ್ರಮಗಳಿಗೆ ಮೀಸಲಾಗಿದ್ದ ಅನುದಾನ ಗ್ಯಾರಂಟಿಗಳಿಗೆ 25369 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ. ಬಜೆಟ್ನಲ್ಲಿ ಗ್ಯಾರಂಟಿಗಳಿಗೆ ಹಣ ಇಟ್ಟಿದ್ದರೂ ಈ ಹಣವನ್ನು ಏಕೆ ಪಡೆದುಕೊಂಡಿದ್ದಾರೆ?
ಕೋಲಾರ ನಗರದಲ್ಲಿ 9 ಓವರ್ ಹೆಡ್ ಟ್ಯಾಂಕ್ ಅಳವಡಿಸಲಾಗಿದೆ. ಆದರೆ, ಹಲವು ವಾರ್ಡ್ಗಳಿಗೆ ಪೈಪ್ ಲೈನ್ ಸಂಪರ್ಕ ಕಲ್ಪಿಸಿಲ್ಲ. ಇದರಿಂದ ನಗರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ತಿರುಗೇಟು ನೀಡಲು ಮುಂದಾಗಿರುವ ಕಾಂಗ್ರೆಸ್, ವಿಪಕ್ಷಗಳ ಪಾದಯಾತ್ರೆ ಸಾಗುವ ಮಾರ್ಗದ ಪ್ರಮುಖ ಸ್ಥಳಗಳಲ್ಲಿ ಬಿಜೆಪಿ ವಿರುದ್ಧ ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಿದೆ.