ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು
ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಬರಗಾಲ ಬರುತ್ತದೆ ಎಂದು ವಿಪಕ್ಷದವರು ಹೇಳುತ್ತಿದ್ದರು. ಈಗ ಅವರ ಬಾಯಿ ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೀಕಿಸಿದರು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ವರ್ಗಾವಣೆ ಸೇರಿದಂತೆ ಹಲವು ಹಗರಣ ನಡೆಸಿದ್ದಾರೆ
ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.