ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸದೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ ಎಂದು ಹೇಳುವ ಮೂಲಕ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ ಮತ್ತು ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ರಾಜಕೀಯ ಜ್ಯೋತಿಷಿಯೇ ಆಗಿದ್ದರೆ ಭವಿಷ್ಯ ಹೇಳುತ್ತಲೇ ಇರಲಿ.
ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ, ಅದಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.
‘ಜಾತಿ ಗಣತಿಗೆ ಬಿಜೆಪಿ ವಿರೋಧವಿಲ್ಲ. ಆದರೆ ವೈಜ್ಞಾನಿಕವಾಗಿ ನಡೆಯಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರದ 10 ವರ್ಷಗಳ ಆಡಳಿತದಲ್ಲಿ ಸ್ವಚ್ಛ ಭಾರತ್ ಮಿಷನ್ನಿಂದ ಹಿಡಿದು ಸ್ವಾವಲಂಬಿ ಭಾರತದ ಕನಸನ್ನು ನನಸಾಗಿಸುವವರೆಗಿನ ವಿವಿಧ ಯೋಜನೆಗಳ ಕುರಿತು ಬೆಳಕು ಚೆಲ್ಲಲಾಗಿದೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲ ಎಂದು ಸಾರುವ ಕರಪತ್ರಗಳನ್ನು ತಾಲೂಕಿನಾದ್ಯಂತ ಹಂಚಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಕೆಟ್ಟ ಮನಸ್ಥಿತಿಯಿಂದಾಗಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಅಂದು ರೈಲ್ವೆ ಕೋಚ್ ಫ್ಯಾಕ್ಟರಿ ಬೇಕು ಎಂದು ಮುಂದೆ ನಿಂತು ಓಡಾಡಿದವರು ಇಂದು ಯಾಕೆ ಶ್ರೀನಿವಾಸಪುರದಲ್ಲಿ ತಾಲೂಕಿನ ಯದರೂರಿನಲ್ಲಿ ಸ್ಥಾಪನೆಯಾಗುವ ಕೈಗಾರಿಕಾ ವಲಯಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಬೇಡ ಎನ್ನಲು ಇವರು ಯಾರು ಎಂದು ಮುಖಂಡರು ಪ್ರಸ್ನಿಸಿದರು.
ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ನೆಲೆಸಲು ಕೇಂದ್ರ ಸರ್ಕಾರದ ವೈಫಲ್ಯ ಕಾರಣ ಎಂದು ಆರೋಪಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.