ಬಿಜೆಪಿ ಕಾಲದ ಅಕ್ರಮ: ಸಿದ್ದು ‘ಬೇಟೆ’ ಆರಂಭ!ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡುಗಿದ ಬೆನ್ನಲ್ಲೇ ರಾಜ್ಯ ಭೋವಿ ನಿಗಮದ ಕೋಟ್ಯಂತರ ರು. ಅವ್ಯವಹಾರ ಪ್ರಕರಣ ಸಂಬಂಧ ನಿಗಮದ ಕಚೇರಿ ಅಧೀಕ್ಷಕ ಪಿ.ಡಿ.ಸುಬ್ಬಪ್ಪ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.