ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಗರಂ ಆಗಿರುವ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, 'ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಆಗಿದೆ' ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ- ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಪ್ರತಿಪಾದಿಸಿದ್ದಾರೆ
ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಹಲವಾರು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಗುರುವಾರ ನಗರದ ಖಾಸಗಿ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಸಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಬಲವಾಗಿ ನಿಲ್ಲಲು ತೀರ್ಮಾನಿಸಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಆರಂಭವಾಗಿರುವ ಗೊಂದಲ ನಿವಾರಣೆ ಹಾಗೂ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ.15 ಅಥವಾ 16ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ.
ಮುನಿರೆಡ್ಡಿಪಾಳ್ಯದ ಅದ್ಧೂರಿ ದಸರಾ ಮಹೋತ್ಸವಕ್ಕೆ ನಗರಾಭಿವೃದ್ಧಿ ಸಚಿವ, ದಸರಾ ಉತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಬೈರತಿ ಸುರೇಶ್ ಅವರು ತಮ್ಮ ಪತ್ನಿಯೊಂದಿಗೆ ಮುನಿರೆಡ್ಡಿ ಪಾಳ್ಯದ ಮಹೇಶ್ವರಮ್ಮ ದೇವಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಉಪಮುಖ್ಯಮಂತ್ರಿ ಸೇರಿದಂತೆ ಏಳು ಸಚಿವರು ಸೇರಿ 140 ಶಾಸಕರು ಇನ್ನೂ ತಮ್ಮ ಆಸ್ತಿವಿವರವನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಿಲ್ಲ.
‘ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್ ಡೀಡ್ ಮೂಲಕ ಜಮೀನು ವಾಪಸು ನೀಡಿದ್ದರು’ ಎಂಬ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಗಂಭೀರ ಆರೋಪ