ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣ, ಲೋಕಾಯುಕ್ತ ಸಂಸ್ಥೆ ಹಿನ್ನೆಲೆ ಸಂತೋಷ್ ಹೆಗ್ಡೆ ಅವರು ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಯಾಗಿದ್ದು ಹೀಗೆ...
ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
‘ನಮ್ಮ ಎಲ್ಲಾ ನ್ಯಾಯಾಲಯಗಳ ಮೇಲೆ ಒಂದು ಅತ್ಯುನ್ನತ ನ್ಯಾಯಾಲಯ ಇದೆ. ಅದೇ ಆತ್ಮಸಾಕ್ಷಿ ನ್ಯಾಯಾಲಯ. ಕೆಲವು ಸಾರಿ ನ್ಯಾಯಾಲಯಗಳಲ್ಲಿ ಎಲ್ಲರಿಗೂ ನ್ಯಾಯ ಸಿಗದೆ ಇರಬಹುದು. ಆದರೆ, ನಾವು ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಬೇಕು.’
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದ್ದಾರೆ.
ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬದವರು ಒಟ್ಟು 43 ನಿವೇಶನ ಪಡೆದಿದ್ದು, ಅವುಗಳನ್ನು ಹಿಂತಿರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಆಗ್ರಹಿಸಿದ್ದಾರೆ.
‘ನಿಗಮ-ಮಂಡಳಿಗಳಿಗೆ ಸದಸ್ಯರ ನೇಮಕಕ್ಕೆ ಹರಸಾಹಸ ನಡೆಯುತ್ತಿದ್ದು, ಹೈಕಮಾಂಡ್ ಸೂಚಿಸಿರುವ ಫಾರ್ಮುಲಾ ಪಾಲನೆ ಮಾಡಿಯೇ ಸದಸ್ಯರ ನೇಮಕ ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.