ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ವಿಷಯದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಶಾಸಕರು ಸಜ್ಜಾಗಿದ್ದು, ಗುರುವಾರ ದೇವರಾಜ ಅರಸು ಟ್ರಕ್ ಟರ್ಮಿನಲ್ನ 200 ಕೋಟಿ ರು. ಅಕ್ರಮವನ್ನು ಪ್ರಸ್ತಾಪಿಸಿ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದಾರೆ.
ಮುಡಾದಿಂದ ಸಿದ್ದರಾಮಯ್ಯ ಬದಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಬರೋಬ್ಬರಿ 32,800 ಚದರಡಿ ವಿಸ್ತೀರ್ಣದ ಕೈಗಾರಿಕಾ ನಿವೇಶನ ಪಡೆದಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ.