ಮುಡಾ ಪ್ರಕರಣದ ತನಿಖೆ ಎದುರಿಸಲು ನಾನು ತಯಾರು. ತನಿಖೆಗೆ ಹೆದರಲ್ಲ. ಕಾನೂನು ಹೋರಾಟ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ರಾಜಕೀಯದಲ್ಲಿ ಇಂತಹ ಷಡ್ಯಂತ್ರ ಹಾಗೂ ಸವಾಲುಗಳು ಸಹಜ. ಸಮರ್ಥವಾಗಿ ಎದುರಿಸಿ ಹೊರಬನ್ನಿ. ಹೈಕಮಾಂಡ್ ನಿಮ್ಮ ಜತೆಯಿದೆ’ ಎಂದು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧೈರ್ಯ ತುಂಬಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂಬ ವಿಷಯದ ಬಗ್ಗೆ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಬೇರೂರಿದೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾಗಿದ್ದು, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಸೇವೆ ರಾಜ್ಯದ ಜನರಿಗೆ ತಿಳಿದಿದೆ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಂದ ಕಲಿಯುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಪರಿಶಿಷ್ಟಜಾತಿ, ಒಕ್ಕಲಿಗ ಸಮುದಾಯ ಮತ್ತು ಮಹಿಳೆಯರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.
ಶಾಸನಸಭೆಗಳು ಜನಸಾಮಾನ್ಯರ ಸಮಸ್ಯೆಗಳ ಚರ್ಚೆಗೆ ವೇದಿಕೆಯಾಗಿದ್ದು, ವಾರ್ಷಿಕವಾಗಿ ಕನಿಷ್ಠ 60 ದಿನ ಅಧಿವೇಶನ ನಡೆಸುವುದು ಕಡ್ಡಾಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಲೋಕಸಭಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ತಿಂಗಳ 25ಕ್ಕೆ ಮುಂದೂಡಿದೆ.