ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೋಮು ದಳ್ಳುರಿ ಬಿತ್ತುವ ಕೆಲಸ ಮಾಡುತ್ತಿದೆ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ
ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತು ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳು ಅರಣ್ಯ ಸಚಿವರನ್ನು ಒತ್ತಾಯಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ನಿಯಮ ಮೀರಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಬಂಧಿತರಾದವರ ಕುಟುಂಬದವರಿಗೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಾಂತ್ವನ ಹೇಳಿ, ಬಂಧಿತರನ್ನು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಸಚಿವರು ಬಾಧಿತ ಕುಟುಂಬಗಳಿಗೆ ನೆರವು ಮತ್ತು ಆರ್ಥಿಕ ನೆರವು ನೀಡುವ ಭರವಸೆ ನೀಡಿದರು.
ದಲಿತರ ವಿರುದ್ಧ ಜಾತಿನಿಂದನೆ ಮಾಡಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಬೆಂಗಳೂರಿನ ಆರ್.ಆರ್.ನಗರದ ಶಾಸಕ ಮುನಿರತ್ನ ನಾಯ್ಡು ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ