ನಿಖಿಲ್ ಮುಂದಿನ ರಾಜ್ಯಾಧ್ಯಕ್ಷರಾಗುವ ಹೊಸ್ತಿಲಲ್ಲಿ ಬಂದು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ‘ಕನ್ನಡಪ್ರಭ’ಕ್ಕೆ ‘ಮುಖಾಮುಖಿ’ಯಾದಾಗ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದು ಹೀಗೆ...
ಎಲ್ಲ ಅಗತ್ಯ ವಸ್ತುಗಳ ದರಗಳನ್ನು ಏರಿಸುವ ಮೂಲಕ ಸಾಮಾನ್ಯ ಜನರ ಜೊತೆ ಚೆಲ್ಲಾಟವಾಡುತ್ತಿದೆ. ಇಂತಹ ಸಂದರ್ಭದಲ್ಲಿ ಹಾಲು ಉತ್ಪಾದಕರ ಖರೀದಿ ದರ 2ರುಪಾಯಿ ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರನ್ನು ಹೈನುಗಾರಿಕೆಯಿಂದ ದೂರ ಉಳಿಯುವಂತೆ ಮಾಡಿದ್ದಾರೆ.
ನಾನು ಮರಳಿ ಬಿಜೆಪಿ ಸೇರಿ ಪಕ್ಷವನ್ನು ಬಲಪಡಿಸುವಂತೆ ಬಿಜೆಪಿ ಮುಖಂಡರಿಂದ ನನಗೆ ಕರೆ ಬಂದಿರುವುದು ನಿಜ. ಆದರೆ, ನನಗೆ ನಾಲ್ಕು ಬಾರಿ ಪಕ್ಷದಿಂದ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಪಕ್ಷದ ಕಾರ್ಯಕರ್ತರು, ಮುಖಂಡರ ಜತೆ ಸಮಾಲೋಚನೆ ನಡೆಸಿದರು.