ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ದರ್ಜೆಯ ಸ್ಥಾನ ಮಾನ ದೊರಕಿದೆ. ಜಿಲ್ಲೆಯಿಂದ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವವರ ಪೈಕಿ ಎಚ್.ಡಿ.ಕುಮಾರಸ್ವಾಮಿ ನಾಲ್ಕನೆಯವರಾಗಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲೀಡ್ ಕೊಡಿಸಲು ವಿಫಲರಾಗಿ ರಾಹುಲ್ ಗಾಂಧಿ ಅವರ ಕೆಂಗಣ್ಣಿಗೆ ಗುರಿಯಾದ ಕೆಲವು ಸಚಿವರು ತಮ್ಮ ಪತ್ನಿ, ಪುತ್ರ ಹಾಗೂ ಸಂಬಂಧಿಕರೇ ಸ್ಪರ್ಧಿಸಿದ್ದರೂ ಅವರಿಗೆ ಲೀಡ್ ಕೊಡಿಸಲು ಸಾಧ್ಯವಾಗಿಲ್ಲ.
ವಿಧಾನಪರಿಷತ್ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಮೂರು ಸ್ಥಾನಗಳು ಲಭಿಸಿದರೆ, ಮೂರು ಸ್ಥಾನಗಳು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪಾಲಾಗಿವೆ
ಲೋಕಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರದಲ್ಲಿ ಪಕ್ಷಕ್ಕೆ ಲೀಡ್ ಕೊಡಿಸುವಲ್ಲಿ ವಿಫಲರಾದ ರಾಜ್ಯದ 17 ಸಚಿವರಿಗೆ ವರಿಷ್ಠ ರಾಹುಲ್ ಗಾಂಧಿ ಕೆಂಗಣ್ಣು ಬೀರಿದ್ದು, ಈ ಸಚಿವರು ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲಿ ಹಿನ್ನಡೆಗೆ ಕಾರಣವೇನು ಎಂಬ ಬಗ್ಗೆ ಸಮಗ್ರ ವರದಿ ನೀಡುವಂತೆ ತಾಕೀತು ಮಾಡಿದ್ದಾರೆ.
ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಪ್ರತಿನಿತ್ಯ30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿಬರುತ್ತಾರೆ. ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು,
ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಗೆ ಮೊದಲಾಗಲಿ ಅಥವಾ ಚುನಾವಣೆ ನಂತರವಾಗಲಿ ನಾನು ಮಂತ್ರಿಯಾಗಬೇಕು, ನನಗೆ ಈ ಖಾತೆಯೇ ಬೇಕು ಎಂದು ಬಿಜೆಪಿ ನಾಯಕರೆದುರು ಬೇಡಿಕೆ ಇಟ್ಟಿಲ್ಲ.