ಮುಡಾ ಹಗರಣ ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ವಾಗಿದೆ. ಅವರು ಏನೆ ಕುತಂತ್ರ ಮಾಡಿದರೂ ರಾಜ್ಯದ ಜನತೆ ಸಿದ್ದರಾಮಯ್ಯರ ಜೊತೆಗಿದ್ದಾರೆ. ಎಲ್ಲ ಕಾಂಗ್ರೆಸ್ ಶಾಸಕರು ಮತ್ತು ಹೈಕಮಾಂಡ್ ಅವರ ಬೆನ್ನಿಗೆ ನಿಂತಿದೆ - ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್
ಮುಡಾ 'ಸೈಟು ಅಕ್ರಮ' ಪ್ರಕರಣದಲ್ಲಿ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಹೋರಾಟ ಆರಂಭಿಸಲಿದ್ದಾರೆ.
ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಕ್ರಮವಾಗಿ ತನಿಖೆ, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಮುಡಾ ಸೈಟ್ ಹಂಚಿಕೆ ಹಗರಣದ ತನಿಖೆಗೆ ರಾಜ್ಯಪಾಲರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸಲಿವೆ.
ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ, ಮುಡಾ ಮಾತ್ರವಲ್ಲ, ವಾಲ್ಮೀಕಿ ಮತ್ತಿತರ ನಿಗಮಗನಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸದನದಲ್ಲೇ ಮುಖ್ಯಮಂತ್ರಿ ಅವ್ಯವಹಾರ ನಡೆದಿರುವುದು 187 ಕೋಟಿ ಅಲ್ಲ 89 ಕೋಟಿ ಎಂದು ಒಪ್ಪಿಕೊಂಡಿದ್ದಾರೆ