2019ರ ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡನ್ನು ತೀರಿಸಿಕೊಳ್ಳುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರೇ 2024ರಲ್ಲಿ ಚುನಾವಣಾ ಅಖಾಡ ಪ್ರವೇಶಿಸಿದ್ದಾರೆ. ಈ ಫಲಿತಾಂಶದೊಂದಿಗೆ ಎಚ್.ಡಿ.ಕುಮಾರಸ್ವಾಮಿ ಹಣೆಬರಹದೊಂದಿಗೆ ಜೆಡಿಎಸ್ ಭವಿಷ್ಯವೂ ನಿರ್ಧಾರವಾಗಲಿದೆ.
ಪ್ರಧಾನಿ ಮೋದಿ ಭಾರತದ ದಕ್ಷಿಣದ ತುತ್ತತುದಿ ಕನ್ಯಾಕುಮಾರಿಯಲ್ಲಿ ಮೇ 30ರಿಂದ ಮೂರು ದಿನಗಳ ಕಾಲ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಸುದೀರ್ಘ ಅವಧಿಯ ಧ್ಯಾನ ಮಾಡಿ ಸಾಧನಾ ಹಂತವನ್ನು ತಲುಪಿದ್ದಾರೆ
‘ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ 70-80 ಸ್ಥಾನ ಮಾತ್ರ ಗಳಿಸಲಿವೆ ಎಂದಿದ್ದವು. ಆ ಸಮೀಕ್ಷೆಗಳು ಸುಳ್ಳಾದಂತೆ ಈ ಬಾರಿಯೂ ಲೋಕಸಭೆ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಲಿವೆ’ ಎಂದು ಡಿ.ಕೆ.ಶಿವಕುಮಾರ್ ಪ್ರತಿಪಾದಿಸಿದ್ದಾರೆ.