ನನ್ನನ್ನು ದೇವರು ಕಳುಹಿಸಿದ್ದಾನೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ವ್ಯಂಗ್ಯವಾಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಿಮಗೆ ದೇವಾಲಯ ನಿರ್ಮಿಸುತ್ತೇವೆ. ಸಾಂಪ್ರದಾಯಿಕ ವಸ್ತುಗಳನ್ನು ಕೊಡುಗೆಯಾಗಿ ನೀಡುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.
ಮಹಾತ್ಮ ಗಾಂಧೀಜಿಯವರ ಕುರಿತು ಚಲನಚಿತ್ರ ಬರುವವರೆಗೂ ಅವರು ಯಾರೆಂದು ಪ್ರಪಂಚಕ್ಕೆ ಗೊತ್ತಿರಲಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಚಿಂತಕರ ಚಾವಡಿ ಎಂದು ಕರೆಸಿಕೊಳ್ಳುವ ವಿಧಾನ ಪರಿಷತ್ತಿಗೆ ವಿದ್ಯಾರ್ಹತೆಯೇ ಇಲ್ಲದವರೊಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡುವುದರೊಂದಿಗೆ ಜೆಡಿಎಸ್-ಬಿಜೆಪಿ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಅಪವಿತ್ರಗೊಳಿಸಿವೆ ಎಂದು ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಎಚ್.ಎ.ವೆಂಕಟೇಶ್ ಆರೋಪಿಸಿದರು.
ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವಾಗ ಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಇಬ್ಬರೇ ತೀರ್ಮಾನ ತೆಗೆದುಕೊಂಡರೆ ಸರಿ ಕಾಣುವುದಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ ಟಿಕೆಟ್ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚಿನ ಆಕಾಂಕ್ಷಿಗಳಿದ್ದು, ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ.