‘ಭಾರತದಲ್ಲಿ ತೀವ್ರವಾದವನ್ನು ಶಾಂತಿ, ಸೌಹಾರ್ದತೆ ಸೋಲಿಸಲಿ’ ಎಂದು ಭಾರತದ ವಿಪಕ್ಷ ನಾಯಕರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದ ಪಾಕಿಸ್ತಾನಿ ರಾಜಕಾರಣಿ ಫವಾದ್ ಹುಸೇನ್ ಚೌಧರಿ ಅವರಿಗೆ ದೆಹಲಿ ಸಿಎಂ ಹಾಗೂ ಆಪ್ ನಾಯಕ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ಗೆ ಲಭ್ಯವಾಗುವ ಒಂದು ಸ್ಥಾನಕ್ಕೆ ಐದು ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.
ವಿಧಾನಪರಿಷತ್ತಿನ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮುಖದಲ್ಲೇ ಅರ್ಹರ ಆಯ್ಕೆ ಮಾಡಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇ 28 ಅಥವಾ 29ರಂದು ದೆಹಲಿಗೆ ತೆರಳಲಿದ್ದಾರೆ.
ಫಲಿತಾಂಶದ ಬಗ್ಗೆ ಜೆಡಿಎಸ್ನವರ ವಾಯ್ಸ್ ಜಾಸ್ತಿ ಇದೆ. ನಮಗೂ ಚುನಾವಣೆ ನಡೆಸಿರುವ ಅನುಭವವಿದೆ. ಚುನಾವಣೆ ಹೇಗೆ ನಡೆದಿದೆ ಎಂಬ ಬಗ್ಗೆ ನಮಗೂ ಮಾಹಿತಿ ಇದೆ. ಅದರ ಆಧಾರದ ಮೇಲೆ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ.