‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೊಡೆ ತಟ್ಟಿವೆ.
‘ನಮ್ಮ ಪಕ್ಷದ ಒಬ್ಬ ಶಾಸಕನನ್ನೂ ಅಲ್ಲಾಡಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಏನೂ ಮಾಡಲು ಸಾಧ್ಯವಿಲ್ಲ. ಸರ್ಕಾರ ಬೀಳಿಸುತ್ತೇವೆ ಎಂಬುದು ಭ್ರಮೆ, ತಿರುಕನ ಕನಸು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ತಾಕತ್ ಇದ್ದರೆ ಭ್ರಷ್ಟಾಚಾರದ ಪಿತಾಮಹ ಅಂದರೆ ಏನು? ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಲಿ. ಆಗ ಅವರನ್ನು ಬಿಜೆಪಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಸಿದ್ದರಾಮಯ್ಯ ದಲಿತ ಪರ ಎಂದು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಎಸ್ಸಿ,ಟಿಪಿಎಸ್ಸಿಗಳ ವಿವಿಧ ಕಾರ್ಯಕ್ರಮಗಳಿಗೆ ಮೀಸಲಾಗಿದ್ದ ಅನುದಾನ ಗ್ಯಾರಂಟಿಗಳಿಗೆ 25369 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ. ಬಜೆಟ್ನಲ್ಲಿ ಗ್ಯಾರಂಟಿಗಳಿಗೆ ಹಣ ಇಟ್ಟಿದ್ದರೂ ಈ ಹಣವನ್ನು ಏಕೆ ಪಡೆದುಕೊಂಡಿದ್ದಾರೆ?