‘ನಾನು ತಪ್ಪು ಮಾಡಿದ್ದರೆ ಇನ್ನೂ ಶಿಕ್ಷೆ ಕೊಡಲಿ. ಏನೂ ತಪ್ಪು ಮಾಡದ ನನಗೆ ಈ ಶಿಕ್ಷೆ ಕೊಟ್ಟಿದ್ದಾರೆ ಎಂದು ದುಃಖಿತರಾಗಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಐದು ನಿಮಿಷ ಕಣ್ಣೀರು ಹಾಕಿದರು’ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮೇಲ್ಮನೆ ಚುನಾವಣೆಗೆ ಘಟಾನುಘಟಿ ನಾಯಕರು ಸೇರಿದಂತೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ.
ಬಿಜೆಪಿಯಲ್ಲಿ ಒಮ್ಮೆ ಅಭ್ಯರ್ಥಿ ಘೋಷಿಸಿದ ಬಳಿಕ ಬದಲಾವಣೆ ಪ್ರಶ್ನೆಯೇ ಇಲ್ಲ. ಹಿಂದೆಂದೂ ಪ್ರಕಟಿತ ಅಭ್ಯರ್ಥಿ ಬದಲಾಯಿಸಿದ ಉದಾಹರಣೆಗಳಿಲ್ಲ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಈ.ಸಿ. ನಿಂಗರಾಜ್ ಗೌಡ ತಿಳಿಸಿದರು.
ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ವಿಧಾನ ಪರಿಷತ್ ಮಾಜಿ ಸದಸ್ಯರಾದ ಮರಿತಿಬ್ಬೇಗೌಡ ಮತ್ತು ಕೆ.ಟಿ. ಶ್ರೀಕಂಠೇಗೌಡ ಮುಖಾಮುಖಿಯಾಗಲಿದ್ದಾರೆ.