ರೈತರ ನೆಪದಲ್ಲಿ ನಾಲೆಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ಸರ್ವ ಪಕ್ಷ ಸಭೆ ಕರೆಯುವ ಮೊದಲೇ ನೀರು ಹರಿಸಿದ್ದಾರೆ. ನೀರು ಬಿಟ್ಟ ಬಳಿಕ ಸಭೆ ಕರೆದರೆ ಹೋಗಿ ಏನು ಮಾಡೋದು?
‘ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಅವರ ಹೇಳಿಕೆ ವೈಯಕ್ತಿಕ. ಪ್ರಯಾಣ ದರ ಏರಿಕೆ ಮಾಡುತ್ತಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಜೀವನ ಬರೀ ಹಿಟ್ ಆ್ಯಂಡ್ ರನ್ ಮಾಡುವುದೇ ಆಗಿದೆ. ಕಸ ವಿಲೇವಾರಿ ಟೆಂಡರ್ ವಿಚಾರವಾಗಿ ಅವರು ಬೀದಿಯಲ್ಲಿ ಮಾತನಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ ಅಥವಾ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ ಡಿ.ಕೆ.ಶಿವಕುಮಾರ್ ಸವಾಲು
ರೈತರು ತಾವು ಬೆಳೆದ ಸಿರಿಧಾನ್ಯವನ್ನು ನೇರವಾಗಿ ಮಾರುಕಟ್ಟೆಗೆ ಮಾರಾಟ ಮಾಡದೆ ಸಂಸ್ಕರಿಸಿ ಮಾರಾಟ ಮಾಡಿದರೆ, ಹೆಚ್ಚಿನ ಲಾಭ ಗಳಿಸಬಹುದು ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಮತ್ತು ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಶಾಸಕರ ಭವನ ಮುಂದೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಪಾದಯಾತ್ರೆ ನಡೆಸಿದರು.
ಆತ್ಮ ನಿರ್ಭರದ ಬಗ್ಗೆ ಬೀದಿ ಬದಿ ವ್ಯಾಪಾರಿಗೆ ಮಾಹಿತಿಗಳೇ ಲಭ್ಯವಿಲ್ಲದಿರುವ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಈ ಸಂಬಂಧ ಅರಿವು ಮೂಡಿಸುವ ಕಾರ್ಯಗಳನ್ನು ಚುರುಕುಗೊಳಿಸುವಂತೆ ತಾಕೀತು ಮಾಡಿದರು.