ಅಪ್ಪರ್ ಭದ್ರಾ, ರೈಲ್ವೆ, ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣಗಳoತಹ ಗೀಳಿಗೆ ಬೀಳದೆ ಅಧ್ಯಯನದಲ್ಲಿ ನಿರತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.
ಯಾವುದೇ ಆದಾಯವಿಲ್ಲದೆ, ಸಂಧ್ಯಾಕಾಲದಲ್ಲಿ ಆಶ್ರಯವಿಲ್ಲದೆ ಪರಿತಪಿಸುವವರ ನೆರವಿಗೆ ರಾಜ್ಯ ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ಪಿಂಚಣಿ ನೀಡುತ್ತಿದ್ದು, ಇದನ್ನು ಆರ್ಹರಿಗೆ ತಲುಪಿಸುವ ಜವಾಬ್ದಾರಿಯನ್ನು ತಾಲೂಕು ಆಡಳಿತ ಮಾಡಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘65 ಕೋಟಿ ಜನರು ಮತ ಚಲಾಯಿಸಿದ ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ, ಜನತೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲ ನಂಬಿಕೆ ವ್ಯಕ್ತಪಡಿಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಶ್ರೀಶೈಲ ಮಠದ ಸ್ವಾಮೀಜಿ ಬಳಿಕ ಇದೀಗ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕೂಡ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸ್ಥಾನಕ್ಕೆ ವೀರಶೈವ ಲಿಂಗಾಯತ ನಾಯಕರನ್ನು ಪರಿಗಣಿಸುವಂತೆ ಕಾಂಗ್ರೆಸ್ ಅನ್ನು ಆಗ್ರಹಿಸಿದ್ದಾರೆ