ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಲ್ಲ ಸಂತ್ರಸ್ತೆಯರು ಧೈರ್ಯವಾಗಿ ಹೊರಬಂದು ತಮಗಾದ ಅನ್ಯಾಯದ ವಿರುದ್ಧ ನಿಲ್ಲಬೇಕು. ಅವರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಅವರಿಗೆ ದನಿಯಾಗಿ ಇಡೀ ಸಮಾಜ ಭಾಗಿಯಾಗಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಮನವಿ ಮಾಡಿದೆ.
‘ನನ್ನ ಅಜ್ಜಿ ಇಂದಿರಾ ಗಾಂಧಿ ಹಾಗೂ ನನ್ನ ತಂದೆ ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರು. ಅಂಥವರು ಹಾಗೂ ಅವರ ಕುಟುಂಬದವರ ಬಗ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ’ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.
ಇಂಡಿಯಾ ಮೈತ್ರಿಕೂಟವನ್ನು ಸತತ 5ನೇ ದಿನವೂ ಗುರಿಯಾಗಿಸಿಕೊಂಡಿರುವ ಪ್ರಧಾನಿ ‘ಕಾಂಗ್ರೆಸ್ ಸಂವಿಧಾನ ಬದಲಾಯಿಸಲು ಬಯಸಿದೆ. ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ದಲಿತರು, ಒಬಿಸಿಗಳ ಮೀಸಲನ್ನು ಧರ್ಮ ಆಧರಿತ ಮೀಸಲಿಗಾಗಿ ದೋಚಲು ಬಯಸಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.