ಸುಮಾರು ಎಂಟು ತಿಂಗಳ ಹಿಂದೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಒಲವು ತೋರಿದ ಜೆಡಿಎಸ್ಗೆ ಆ ದೋಸ್ತಿ ಅಂತಿಮವಾಗಿ ಒಳ್ಳೆಯ ಲಾಭವನ್ನೇ ತಂದು ಕೊಟ್ಟಿದೆ.
ನರೇಂದ್ರ ಮೋದಿಯ ಮೂರನೇ ಸಂಪುಟದಲ್ಲಿ ಉತ್ತರಪ್ರದೇಶ ಮತ್ತು ಬಿಹಾರಕ್ಕೆ ಸಿಂಹಪಾಲು ದೊರೆತಿದೆ. ಉತ್ತರಪ್ರದೇಶಕ್ಕೆ 9 ಮತ್ತು ಬಿಹಾರಕ್ಕೆ 8 ಸಚಿವ ಸ್ಥಾನ ಲಭಿಸಿದೆ. ಅಲ್ಲದೆ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರಕ್ಕೂ 6 ಸಚಿವ ಸ್ಥಾನ ನೀಡಲಾಗಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ದರ್ಜೆಯ ಸ್ಥಾನ ಮಾನ ದೊರಕಿದೆ. ಜಿಲ್ಲೆಯಿಂದ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವವರ ಪೈಕಿ ಎಚ್.ಡಿ.ಕುಮಾರಸ್ವಾಮಿ ನಾಲ್ಕನೆಯವರಾಗಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲೀಡ್ ಕೊಡಿಸಲು ವಿಫಲರಾಗಿ ರಾಹುಲ್ ಗಾಂಧಿ ಅವರ ಕೆಂಗಣ್ಣಿಗೆ ಗುರಿಯಾದ ಕೆಲವು ಸಚಿವರು ತಮ್ಮ ಪತ್ನಿ, ಪುತ್ರ ಹಾಗೂ ಸಂಬಂಧಿಕರೇ ಸ್ಪರ್ಧಿಸಿದ್ದರೂ ಅವರಿಗೆ ಲೀಡ್ ಕೊಡಿಸಲು ಸಾಧ್ಯವಾಗಿಲ್ಲ.
ವಿಧಾನಪರಿಷತ್ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಮೂರು ಸ್ಥಾನಗಳು ಲಭಿಸಿದರೆ, ಮೂರು ಸ್ಥಾನಗಳು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪಾಲಾಗಿವೆ